Featured

ಮಂಗಳೂರು : ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ಕರಾವಳಿಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ – vishwanews24

ಮಂಗಳೂರು : ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ಕರಾವಳಿಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ಮಂಗಳೂರು : ಈ ಬಾರಿಯ ಕರಾವಳಿ ಉತ್ಸವದ ಅಂಗವಾಗಿ ಮಂಗಳೂರಿನಲ್ಲಿ ಹೆಲಿಕಾಪ್ಟರ್ ಮೂಲಕ ಕರಾವಳಿಯ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಒಬ್ಬರಿಗೆ ತಲಾ ರೂಪಾಯಿ 4500.00 ವೆಚ್ಚದಲ್ಲಿ ಮಂಗಳೂರು ಪ್ರದೇಶವನ್ನು ಆಕಾಶ ಮಾರ್ಗದಲ್ಲಿ ಹೆಲಿಕಾಪ್ಟರ್ ಮೂಲಕ ಸುತ್ತ ಹಾಕಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನ ತುಂಬಿ ಹೆಲಿಟೂರಿಸಂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಹೆಲಿಕಾಪ್ಟರ್ ಮೂಲಕ ಡಿ.21ರಿಂದ 31ರವರೆಗೆ ಮೇರಿಹಿಲ್ ಹೆಲಿಪ್ಯಾಡ್ ಮೂಲಕ ಒಂದು ಬಾರಿ ಆರು ಮಂದಿ ಪ್ರಯಾಣಿಸಲು ಸಾಧ್ಯವಿರುವ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಬಹುದಾಗಿದೆ. ಈ ಹೆಲಿಕಾಪ್ಟರ್ ಮಂಗಳೂರು ಆಸುಪಾಸಿನಲ್ಲಿ ಸುಮಾರು 5ರಿಂದ 7ನಿಮಿಷಗಳ ಒಳಗೆ ಆಕಾಶದಲ್ಲಿ ಒಂದು ಪ್ರದಕ್ಷಿಣೆ ಬಂದು ಮೇರಿ ಹಿಲ್ ಗೆ ಮರಳುತ್ತದೆ.

ಮಂಗಳೂರನ್ನು ಪಕ್ಷಿ ನೋಟದಲ್ಲಿ ನೋಡುವ ಅವಕಾಶ

ಈ ಬಾರಿಯ ಕರಾವಳಿ ಉತ್ಸವದ ವಿಶೇಷ ಆಕರ್ಷಣೆಯಾಗಿ ಮತ್ತು ಹೆಲಿಟೂರಿಸಂ ಅನ್ನು ಮಂಗಳೂರು ಜನತೆಗೆ ಪರಿಚಯಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಮೇರಿ ಹಿಲ್ ಹೆಲಿಪ್ಯಾಡ್ ನಿಂದ ಇಂದು ಸಂಜೆ ಪ್ರಾಯೋಗಿಕವಾಗಿ ಪತ್ರಕರ್ತರ ಒಂದು ತಂಡ ಕ್ಯಾಪ್ಟನ್ ವಿ.ಎಸ್ .ಮಲಿಕ್ ರ ನೇತೃತ್ವದಲ್ಲಿ ತುಂಬಿ ಹೆಲಿಟೂರಿಸಂ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಹೆಲಿಕಾಪ್ಟರ್ ಮೂಲಕ ಒಂದು ಸುತ್ತು ನಗರ ಪ್ರದಕ್ಷಿಣೆ ಮಾಡಿದೆ.

ಮೂರು ನಿಮಿಷದಲ್ಲಿ ಮೇರಿ ಹಿಲ್ ಪಣಂಬೂರು, ಮಹಾನಗರ ಪಾಲಿಕೆ, ಪಂಪ್ ವೆಲ್ ನೇತ್ರಾವತಿ ನದಿ ಕಿನಾರೆಯ ಮೂಲಕ ಮರಳಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

13 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

16 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

16 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

16 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

16 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

17 hours ago