Featured

ಮಂಗಳೂರು: ಕರಾವಳಿ ಕ್ರೀಡಾಲೋಕಕ್ಕೆ ಅಂತಾರಾಷ್ಟ್ರೀಯ ಈಜುಕೊಳ ಲೋಕಾರ್ಪಣೆ – vishwanews24

ಮಂಗಳೂರು: ಕರಾವಳಿ ಕ್ರೀಡಾಲೋಕಕ್ಕೆ ಅಂತಾರಾಷ್ಟ್ರೀಯ ಈಜುಕೊಳ ಲೋಕಾರ್ಪಣೆ

ಮಂಗಳೂರು : ಮಂಗಳೂರು ನಗರದ ಎಮ್ಮೆಕೆರೆಯಲ್ಲಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ಈಜುಕೊಳವು ಶುಕ್ರವಾರ (ನ.24) ಲೋಕಾರ್ಪಣೆಗೊಳ್ಳಲಿದ್ದು, ಆ ಮೂಲಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾನದಂಡದ ಕ್ರೀಡಾ ಮೂಲಸೌಲಭ್ಯಗಳು ಮಂಗಳೂರು ನಗರಕ್ಕೆ ಪಾದಾರ್ಪಣೆಗೊಳ್ಳಲಿದೆ.

ಜಿಲ್ಲಾಡಳಿತ, ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕ್ರೀಡಾ ಅಭಿವೃದ್ಧಿ ವಲಯದಲ್ಲಿ ತನ್ನ ಮೂಲ ಭಾಗವಾಗಿ ಎಮ್ಮೆಕೆರೆಯಲ್ಲಿ ಸಮುದಾಯ ಮಟ್ಟದ ಅಂತಾರಾಷ್ಟ್ರೀಯ ಒಲಿಂಪಿಕ್ ಗುಣಮಟ್ಟದ ಈಜುಕೊಳವನ್ನು ನಿರ್ಮಿಸಲಾಗಿದೆ. ಸುಮಾರು 2 ಎಕರೆ ಜಾಗದಲ್ಲಿ 24.94 ಕೋಟಿ ರೂಪಾಯಿ ವೆಚ್ಚದಲ್ಲಿ ಈಜುಕೊಳವು ನಿರ್ಮಾಣಗೊಂಡಿದೆ.

ಅಂತಾರಾಷ್ಟ್ರೀಯ ಈಜು ಒಕ್ಕೂಟದ ನಿಖರವಾದ ಮಾನದಂಡಗಳಿಗೆ ಅನುಗುಣವಾಗಿ ನಿರ್ಮಿಸಲಾದ ಈಜುಕೊಳ ಸಂಕೀರ್ಣವು 50ಮೀ ಉದ್ದ, 25ಮೀ ಅಗಲ ಮತ್ತು 2.2ಮೀ ನಿಂದ 1.4ಮೀ ವರೆಗಿನ ಆಳವನ್ನು ಹೊಂದಿರುವ ಸ್ಪರ್ಧಾತ್ಮಕ ಪೂಲ್ ಹೊಂದಿದೆ. ಸ್ಪರ್ಧೆಯ ಪೂಲ್ ಜೊತೆಗೆ, ಕ್ರೀಡಾಪಟುಗಳಿಗೆ ತರಬೇತಿಗಾಗಿ 25 ಮೀ ಉದ್ದ, 10 ಅಗಲ ಮತ್ತು 2.2 ಮೀ ಆಳದ ಅಭ್ಯಾಸ ಪೂಲ್ ಅನ್ನು ನಿರ್ಮಿಸಲಾಗಿದೆ. ಇದಲ್ಲದೇ, ಸ್ಪರ್ಧಾತ್ಮಕ ಈಜು ಕ್ರೀಡೆಗಳಿಗೆ ಮಕ್ಕಳನ್ನು ಆರಂಭಿಕ ಹಂತದಲ್ಲೇ ತರಬೇತುಗೊಳಿಸುವ ಉದ್ದೇಶದಿಂದ ಪಕ್ಕದಲ್ಲಿಯೇ 13.8ಮೀ ಉದ್ದ, 10ಮೀ ಅಗಲ ಮತ್ತು 1.2ಮೀ ಆಳದ ಪುಟಾಣಿ ಈಜುಕೊಳ ಸಹ ನಿರ್ಮಿಸಲಾಗಿದೆ.

ಸಾಮಾನ್ಯವಾಗಿ ಈಜುಕೊಳವನ್ನು ನೆಲದಲ್ಲಿಯೇ ನಿರ್ಮಿಸಲಾಗುತ್ತಿದೆ. ಆದರೆ, ಮಂಗಳೂರು ಅಂತಾರಾಷ್ಟ್ರೀಯ ಈಜುಕೊಳದ ವೈಶಿಷ್ಟ್ಯವೇನೆಂದರೆ, ನೆಲದಿಂದ +7.0ಮೀ ಡೆಕ್ ಮಟ್ಟದ ಎತ್ತರದಲ್ಲಿ ನಿರ್ಮಿಸಲಾಗಿದೆ. ಇದರಿಂದ ಈಜುಕೊಳದ ನೆಲಮಹಡಿಯಲ್ಲಿ ವಾಹನ ನಿಲುಗಡೆ ಪಾರ್ಕಿಂಗ್‍ಗೆ ಸಾಕಷ್ಟು ಸ್ಥಳಾವಕಾಶ ಲಭ್ಯವಾಗಿದೆ. ದೇಶದ ಕೆಲವೇ ಕಡೆಗಳಲ್ಲಿ ಇಂತಹ ಈಜುಕೊಳಗಳನ್ನು ನಿರ್ಮಿಸಲಾಗಿದೆ.

ಈ ಅಂತಾರಾಷ್ಟ್ರೀಯ ಈಜುಕೊಳ ಸಂಕೀರ್ಣದಲ್ಲಿ ಸ್ಪರ್ಧಾಳು ಈಜುಪಟುಗಳಿಗೆ ವಸತಿ ನಿಲಯಗಳು, ಜಿಮ್ನಾಷಿಯಂ, ಬಟ್ಟೆ ಬದಲಾಯಿಸುವ ಕೊಠಡಿಗಳು, ಶೌಚಾಲಯಗಳು, ಲಾಕರ್‍ಗಳು, ಆಡಳಿತ ಕಚೇರಿ ಮತ್ತು ಕ್ರೀಡಾ ಔಷಧ ಮತ್ತು ಚಿಕಿತ್ಸಾ ಕೊಠಡಿಗಳು, ಫಿಸಿಯೋಥೆರಪಿ ಕೇಂದ್ರ ಸೇರಿದಂತೆ ಅಂತರರಾಷ್ಟ್ರೀಯ ಈಜು ಸ್ಪರ್ಧೆಯಂತಹ ಕಾರ್ಯಕ್ರಮಗಳನ್ನು ನಡೆಸಲು ಬೇಕಾದ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಹೊಂದಿದೆ.

ಈಜು ಸ್ಪರ್ಧೆ ಸಂದರ್ಭದಲ್ಲಿ ನೋಡಲು ಬರುವ ವೀಕ್ಷಕರಿಗೂ ಉತ್ತಮ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಈ ತೆರೆದ ಆಕಾಶ ಈಜುಕೊಳದಲ್ಲಿ 400 ಜನರ ಸಾಮಥ್ರ್ಯದ ವೀಕ್ಷಕರ ಗ್ಯಾಲರಿಯನ್ನು ಹೊಂದಿದೆ. ವೀಕ್ಷಕರಿಗೆ ತಂಪಾದ ಗಾಳಿ ಬೀಸಲು ಬೃಹತ್ ಗಾತ್ರದ ಫ್ಯಾನುಗಳನ್ನು ಅಳವಡಿಸಲಾಗಿದೆ. ವೀಕ್ಷಕರ ಆಸನದ ಎದುರು ಭಾಗದಲ್ಲಿ ಈಜುಗಾರರು, ಅಧಿಕಾರಿಗಳು, ತರಬೇತುದಾರರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ನಿಗಧಿಪಡಿಸಲಾಗಿದೆ.

ಎತ್ತರದಲ್ಲಿರುವ ಈಜುಕೊಳ ಹಾಗೂ ವೀಕ್ಷಕರ ಗ್ಯಾಲರಿ ಪ್ರವೇಶಿಸಲು 2 ಸುಸಜ್ಜಿತ ಲಿಫ್ಟ್ ಸೌಲಭ್ಯ ನಿರ್ಮಿಸಲಾಗಿದೆ. ಅಂತಾರಾಷ್ಟ್ರೀಯ ಈಜುಕೊಳದ ನೀರಿನೊಳಗೆ ಸಂಪೂರ್ಣ ಬೆಳಕು ಮೂಡುವಂತೆ ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಸಾರವಾಗಿ ಲೈಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ರಾತ್ರಿ ವೇಳೆಯಲ್ಲಿ ಈ ಈಜುಕೊಳವು ಆಕರ್ಷಕ ವರ್ಣದ ಬೆಳಕಿನಿಂದ ಮೂಡಿಬರಲಿದೆ. ಈಜುಕೊಳದಲ್ಲಿ ನೀರು ಹೆಚ್ಚಾದರೆ (ಓವರ್‍ಫ್ಲೋ) ಹರಿಯಲು ಚಾನೆಲ್ ವ್ಯವಸ್ಥೆ, ಆರಂಭಿಕ ಬ್ಲಾಕ್‍ಗಳು ಮತ್ತು ಈಜುಕೊಳದೊಳಗೆ ಪ್ರತೀ ಸ್ಪರ್ಧಾಳುಗಳಿಗೆ ಪ್ರತ್ಯೇಕ ಲೇನ್ ವಿಭಜಕಗಳು ಪೂರ್ಣಗೊಂಡಿದೆ. ಇಡೀ ಈಜುಕೊಳ ಸಂಕೀರ್ಣದ ಬಹುತೇಕ ಕಾಮಗಾರಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಾಮಾಗ್ರಿಗಳಿಂದ ನಿರ್ಮಿಸಲಾಗಿದೆ.

ಈ ಅಂತಾರಾಷ್ಟ್ರೀಯ ಈಜುಕೊಳದಿಂದ ಮಂಗಳೂರು ನಗರವು ಅಂತಾರಾಷ್ಟ್ರೀಯ ಮಟ್ಟದ ಈಜು ಸ್ಪರ್ಧಾಕೂಟಗಳಿಗೆ ತೆರೆದುಕೊಂಡಂತಾಗಿದೆ. ಒಲಿಂಪಿಕ್ ಕ್ರೀಡಾಕೂಟದ ಈಜುಕೊಳದ ಗುಣಮಟ್ಟದಲ್ಲಿಯೇ ಇದನ್ನು ನಿರ್ಮಿಸಲಾಗಿದ್ದು, ಕಾಮಗಾರಿಯ ಪ್ರತಿಯೊಂದು ಹಂತದಲ್ಲೂ ನಿಖರವಾದ ಮಾನದಂಡವನ್ನು ಪಾಲಿಸಲಾಗಿದೆ. ಇದು ಮುಂದಿನ ದಿನಗಳಲ್ಲಿ ಮಂಗಳೂರು ನಗರವನ್ನು ಇನ್ನಷ್ಟು ಪ್ರವರ್ಧಮಾನಕ್ಕೆ ಕೊಂಡೊಯ್ಯಲಿದೆ. ಅಲ್ಲದೇ, ಭವಿಷ್ಯದಲ್ಲಿ ಕರಾವಳಿ ಕರ್ನಾಟಕದ ಈಜು ಕ್ರೀಡಾಪಟುಗಳಿಗೆ ಉತ್ತಮ ಅವಕಾಶವನ್ನು ಒದಗಿಸಲಿದೆ.

ರಾಷ್ಟ್ರೀಯ ಮಾಸ್ಟರ್ ಚಾಂಪಿಯನ್‍ಶಿಪ್:

ಮಂಗಳೂರು ಅಂತಾರಾಷ್ಟ್ರೀಯ ಈಜುಕೊಳದ ಉದ್ಘಾಟನಾ ಸಂದರ್ಭದಲ್ಲಿಯೇ ರಾಷ್ಟ್ರೀಯ ಮಾಸ್ಟರ್ ಚಾಂಪಿಯನ್‍ಶಿಪ್ ಈಜು ಸ್ಪರ್ಧೆಯನ್ನೂ ಏರ್ಪಡಿಸಲಾಗಿದ್ದು, ಈಜುಕೊಳಕ್ಕೆ ಮೆರುಗು ತಂದಿದೆ. 3 ದಿನಗಳ ಕಾಲ ನಡೆಯಲಿರುವ ಈ ಸ್ಪರ್ಧಾಕೂಟದಲ್ಲಿ ಈಗಾಗಲೇ ದೇಶದ 29 ರಾಜ್ಯಗಳ 700ಕ್ಕೂ ಅಧಿಕ ಕ್ರೀಡಾಪಟುಗಳು ಈಗಾಗಲೇ ಮಂಗಳೂರು ನಗರಕ್ಕೆ ಆಗಮಿಸಿದ್ದಾರೆ.

ಉದ್ಘಾಟನಾ ಕಾರ್ಯಕ್ರಮ:

ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆ ನವೆಂಬರ್ 24ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಸ್ಪೀಕರ್ ಯು.ಟಿ. ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ ಅಂತರಾಷ್ಟ್ರೀಯ ಈಜುಕೊಳವನ್ನು ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ಉದ್ಘಾಟಿಸುವರು.

19ನೇ ರಾಷ್ಟ್ರೀಯ ಮಾಸ್ಟರ್ ಚಾಂಪಿಯನ್‍ಶಿಪ್ ಈಜು ಸ್ಪರ್ಧೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದು, ಈಜು ಸ್ಪರ್ಧೆಯ ಸ್ಮರಣಸಂಚಿಕೆಯನ್ನು ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ ನಾಗೇಂದ್ರ ಬಿಡುಗಡೆ ಮಾಡುವರು. ಅಂತರಾಷ್ಟ್ರೀಯ ಈಜುಕೊಳ ಕಟ್ಟಡದ ವಿಶ್ರಾಂತಿ ಕೊಠಡಿಯನ್ನು ಲೋಕಸಭೆ ಸದಸ್ಯ ನಳಿನ್ ಕುಮಾರ್ ಕಟೀಲ್ ಹಾಗೂ ಈಜುಕೊಳ ಜಿಮ್ ಕೊಠಡಿಯನ್ನು ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಶಾಸಕ ಡಿ ವೇದವಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

18 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

19 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

19 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

20 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

20 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

20 hours ago