Featured

ಮಂಗಳೂರು: ಕರಾವಳಿ ಜನ ತುಂಬಾ ಸ್ವಾಭಿಮಾನಿಗಳು, ಯಾರನ್ನೂ ಅಷ್ಟು ಬೇಗ ಇಷ್ಟಪಡಲ್ಲ :ಕಿಚ್ಚ ಸುದೀಪ್ – vishwanews24

ಮಂಗಳೂರು: ಕರಾವಳಿ ಜನ ತುಂಬಾ ಸ್ವಾಭಿಮಾನಿಗಳು, ಯಾರನ್ನೂ ಅಷ್ಟು ಬೇಗ ಇಷ್ಟಪಡಲ್ಲ :ಕಿಚ್ಚ ಸುದೀಪ್

ಮಂಗಳೂರು: ಕರಾವಳಿ ಜನ ತುಂಬಾ ಸ್ವಾಭಿಮಾನಿಗಳು. ಇಲ್ಲಿಯ ಜನ ಅಷ್ಟು ಬೇಗ ಯಾರನ್ನೂ ಇಷ್ಟಪಡಲ್ಲ. ಆದರೂ ನಿಮ್ಮ ಮನಸಿನಲ್ಲಿ ನನಗೆ ಜಾಗ ಕೊಟ್ಟಿದ್ದೀರಿ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಿರೂಪಕರು ಆಗಿನಿಂದ ನಮ್ಮ ತುಳುನಾಡಿಗೆ, ನಮ್ಮ ತುಳುನಾಡಿಗೆ ಸ್ವಾಗತ ಅಂತ ನಮ್ಮನ್ನು ಹೊರಗಿನವರು ಅಂತ ಮಾಡ್ತಿದ್ದಾರೆ. ತುಳುನಾಡು ನಮ್ಮ ಕರ್ನಾಟಕದಲ್ಲಿದೆ, ಕರ್ನಾಟಕ ನಮ್ಮ ಹೃದಯದಲ್ಲಿದೆ ತಾನೇ. ಮತ್ತೆ ಮಾತ್ ಮಧ್ಯೆ ಹೆಳ್ತಾರೆ ನಾವು ಅರ್ಧ ಈ ಕಡೆಯವರು ಅಂತ ಎಂದು ಕಿಚಾಯಿಸಿದರು.

ನನ್ನ ಅಪ್ಪಂಗೆ ಕರ್ನಾಟಕದ ಕರಾವಳಿ ಹುಡುಗಿನೇ ಇಷ್ಟ ಆಗಿದ್ದು. ಕರಾವಳಿ ಜನ ತುಂಬ ಸ್ವಾಭಿಮಾನಿಗಳು. ಇಲ್ಲಿಯ ಜನ ಅಷ್ಟು ಬೇಗ ಯಾರನ್ನು ಇಷ್ಟಪಡಲ್ಲ, ಅದ್ರು ನಿಮ್ಮ ಮನಸ್ಸಿನಲ್ಲಿ ನಂಗೆ ಜಾಗ ಕೊಟ್ಟಿದ್ದೀರಿ. ನಾನು ಗೌರವ ಪಡೆಯಲು ಬಂದಿಲ್ಲ. ನಿಮ್ಮ ಪ್ರೀತಿಗೆ ಬಂದಿದ್ದೇನೆ. ನನ್ನ ತಾಯಿ ಕರಾವಳಿಯವರು. ಅವರು ಚೆನ್ನಾಗಿ ತುಳು ಮಾತಾಡ್ತಾರೆ. ನನಗೆ ತುಳು ಅಷ್ಟೊಂದು ಬರಲ್ಲ ಎಂದರು.

ಕನ್ನಡ ಚಿತ್ರರಂಗಕ್ಕೆ ಕರಾವಳಿಗರು ಬಂದು ಕನ್ನಡ ಯಾವುದು ತುಳು ಯಾವುದು ಗೊತ್ತಾಗ್ತಾ ಇಲ್ಲ. ತುಳು ಚಿತ್ರರಂಗ ಬೆಂಗಳೂರಿಗೆ ಬಂದದ್ದು ತುಂಬಾ ಖುಷಿಯಾಗಿದೆ. ಯಕ್ಷಗಾನ ಕಲೆ ಎದುರು ನಾವು ಇನ್ನೂ ಚಿಕ್ಕವರು. ಪಟ್ಲ ಫೌಂಡೇಷನ್ ದೊಡ್ಡ ಸಾಧನೆ ಮಾಡಿದೆ. 8 ವರ್ಷದಲ್ಲಿ 11 ಕೋಟಿ ಮೊತ್ತ ಬಡವರಿಗೆ ಸಹಾಯ ಮಾಡಿದ್ದಾರೆ. ಯಕ್ಷಗಾನ ಕಲಾವಿದ ಪಟ್ಲ ಸತೀಶ್ ಶೆಟ್ಟಿ ಸಾಧನೆ ಅಪಾರವಾದ್ದು ಎಂದು ಕಿಚ್ಚ ಸುದೀಪ್ ತಿಳಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

19 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

21 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

21 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

21 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

21 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago