ಮಂಗಳೂರು: ನಗರದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿನ ಮುಖ್ಯ ರಸ್ತೆಯಲ್ಲಿರುವ ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದ ಕಳವು ಯತ್ನ ಹಾಗೂ ಮೂರ್ತಿಗಳ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಳಾಯಿ ನಿವಾಸಿ ರೋಹಿತಾಶ್ವ ಬಂಧಿತ.
ಆರೋಪಿ ರೋಹಿತಾಶ್ವ ದೈವಸ್ಥಾನದಲ್ಲಿನ ಹಣ, ಮೌಲ್ಯಯುತ ಸೊತ್ತಿನ ಆಸೆಗೆ ಕಳವು ಕೃತ್ಯ ನಡೆಸಲು ಮುಂದಾಗಿದ್ದಾನೆ. ಆದರೆ, ಏನೂ ದೊರಕದಿರುವ ಹಿನ್ನೆಲೆಯಲ್ಲಿ ಅಲ್ಲಿನ ಮೂರ್ತಿಗಳನ್ನು ಧ್ವಂಸಗೊಳಿಸಲು ಯತ್ನಿಸಿದ್ದಾನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಆರೋಪಿ ದೈವಸ್ಥಾನದ ಕಾಣಿಕೆ ಡಬ್ಬಿ ಮತ್ತು ಕಚೇರಿ ಒಳಗಿರುವ ಕಪಾಟುಗಳನ್ನು ಜಾಲಾಡಿದ್ದಾನೆ. ಆದರೆ, ಏನೂ ದೊರಕದಿದ್ದಾಗ ಹತಾಶೆಗೊಂಡು ಅಲ್ಲಿದ್ದ ಶಿವಲಿಂಗ, ನಾಗದೇವರ ಮೂರ್ತಿಗಳನ್ನು ಧ್ವಂಸಗೊಳಿಸಿದ್ದಾನೆ. ಈ ಸಂಬಂಧ ಅ. 17ರಂದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…