Featured

ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಕೊಲೆ ಯತ್ನ ಪ್ರಕರಣ : 6 ಮಂದಿ ಬಂಧನ -Vishwanews24

ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಕೊಲೆ ಯತ್ನ ಪ್ರಕರಣ : 6 ಮಂದಿ ಬಂಧನ -Vishwanews24

ಮಂಗಳೂರು, : ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವರಿಗೆ ಕಳೆದ ಡಿಸೆಂಬರ್‌ 16 ರಂದು ಹಾಡುಹಗಲಲ್ಲೇ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನ ಮಾಡಿದ್ದ ಘಟನೆಯು ಮಂಗಳೂರು ಗೋಲಿಬಾರ್‌ ರಿವೇಂಜ್‌ ಎಂಬ ಮಾಹಿತಿ ದೊರೆತಿದ್ದು ಈ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ.

ಮಂಗಳೂರಿನ ಬಂದರು ಠಾಣಾ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಗಣೇಶ್ ಕಾಮತ್ ಹಾಗೂ ಮಹಿಳಾ ಸಿಬ್ಬಂದಿಯೋರ್ವರು ನಗರದ ನ್ಯೂಚಿತ್ರ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರಲ್ಲಿ ಓರ್ವ ಬೈಕ್‌ನಿಂದ ಇಳಿದು ಪೊಲೀಸರು ಕುಳಿತುಕೊಂಡಲ್ಲಿಗೆ ಹೋಗಿ ಗಣೇಶ್ ಕಾಮತ್‌ಗೆ ತಲವಾರಿನಿಂದ ದಾಳಿ ನಡೆಸಿ ಬೈಕ್‌ ಏರಿ ಪರಾರಿಯಾಗಿದ್ದರು.

ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಮಾಹಿತಿ ನೀಡಿದರು.

ಗೊಲೀಬಾರ್‌ನಿಂದ ಕಾನೂನು ಸುವ್ಯವಸ್ಥೆ ಬಗ್ಗೆ ಅಸಮಾಧಾನದ ಹಿನ್ನೆಲೆ ಪೊಲೀಸರ ಮೇಲೆ ಕೊಲೆ ಯತ್ನ ನಡೆಸಲಾಗಿದೆ ಎಂದು ತಿಳಿದು ಬಂದಿದ್ದು ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ. 16 ವರ್ಷದ ಬಾಲಕ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಬಂಟ್ವಾಳ ನಿವಾಸಿ ಮಹಮ್ಮದ್ ನವಾಝ್ (30), ಕುದ್ರೋಳಿ ನಿವಾಸಿ ಅನೀಶ್ ಅಶ್ರಫ್ (22), ಕುದ್ರೋಳಿ ನಿವಾಸಿ ಅಬ್ದುಲ್ ಖಾದರ್ ಫಹಾದ್ (23), ಬಜಪೆ ನಿವಾಸಿ ಶೇಖ್ ಮಹಮ್ಮದ್ ಹ್ಯಾರಿಸ್ ಯಾನಿ ಜಿಗ್ರಿ (31), ಕುದ್ರೋಳಿ ನಿವಾಸಿ ರಾಹಿಲ್ ಯಾನೆ ಚೋಟು ರಾಹಿಲ್ (18), ತಣ್ಣೀರು ಬಾವಿ ನಿವಾಸಿ ಮಹಮ್ಮದ್ ಖಾಯೀಸ್ (24) ಬಂಧಿತರು.

ಕೃತ್ಯದ ಹಿಂದೆ ಮಾಯ ಗ್ಯಾಂಗ್‌ ಮತ್ತು ಇನ್ನೊಂದು ಗ್ಯಾಂಗ್‌ ಭಾಗಿಯಾಗಿದ್ದು ನೈಟ್ರೋವಿಟ್ ಟ್ಯಾಬ್ಲೆಟ್ ಬಳಸಿ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ..

 

http://ಬಾರ್ಡರ್-ಗವಾಸ್ಕರ್ ಟ್ರೋಪಿ : ರಿಷಬ್ ಪಂತ್ ಅದ್ಭುತ ಆಟ : ಆಸ್ಟ್ರೇಲಿಯಾ ವಿರುದ್ಧ ರೋಚಕ ಗೆಲುವು ಸಾಧಿಸಿದ ಭಾರತ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

8 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago