Featured

ಮಂಗಳೂರು: ಸಿಇಐಆರ್ ಪೋರ್ಟಲ್ ಮೂಲಕ ಕಳೆದು ಹೋದ ಮೊಬೈಲ್‌ ವಾರಸುದಾರರಿಗೆ ಹಸ್ತಾಂತರ – Vishwanews24

ಮಂಗಳೂರು: ಕಳೆದು ಹೋದ ಮೊಬೈಲ್‌ ಪತ್ತೆಗೆ ಸಿಇಐಆರ್‌ ಪೋರ್ಟಲ್‌ : 39 ಮೊಬೈಲ್‌ ಪೋನ್‌ ವಾರಸುದಾರರಿಗೆ ಹಸ್ತಾಂತರ

ಮಂಗಳೂರು: ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಕಳೆದುಹೋದ/ಕಳವಾದ 39 ಮೊಬೈಲ್‌ಗ‌ಳನ್ನು ಸಿಇಐಆರ್‌ ಪೋರ್ಟಲ್‌ ಮೂಲಕ ಪತ್ತೆ ಹಚ್ಚಲಾಗಿದ್ದು ಅದನ್ನು ಗುರುವಾರದಂದು ಪೊಲೀಸ್‌ ಆಯುಕ್ತರು ವಾರಸುದಾರರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ಅವರು, ಕಳೆದ 5 ತಿಂಗಳಲ್ಲಿ ಕಮಿಷನರೆಟ್‌ ವ್ಯಾಪ್ತಿಯಲ್ಲಿ 402 ಮಂದಿ ಮೊಬೈಲ್‌ ಕಳೆದುಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ. ಆ ಪೈಕಿ 124 ಮೊಬೈಲ್‌ಗ‌ಳನ್ನು ಪತ್ತೆ ಹಚ್ಚಲಾಗಿದ್ದು 39 ಮೊಬೈಲ್‌ನ್ನು ಜಪ್ತಿ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗುತ್ತಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 7 ಲ.ರೂ.ಗಳಾಗಿವೆ. ಉಳಿದ ಮೊಬೈಲ್‌ಗ‌ಳನ್ನು ಕೂಡ ಶೀಘ್ರದಲ್ಲೇ ಜಪ್ತಿ ಮಾಡಲಾಗುವುದು. ಸಿಇಐಆರ್‌ ಪೋರ್ಟಲ್‌ನ್ನು ಪೊಲೀಸರು ಅಥವಾ ಮೊಬೈಲ್‌ ಕಳೆದುಕೊಂಡವರು ನೇರವಾಗಿ ಬಳಕೆ ಮಾಡಬಹುದು. ಇದರಿಂದ ಮೊಬೈಲ್‌ ಪೋನ್‌ ಪತ್ತೆಗೆ ಹಾಗೂ ಅದರ ಮಾಲಕರಿಗೆ ಮರಳಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಏನಿದು ಸಿಇಐಆರ್‌ ಪೋರ್ಟಲ್‌?
ಕಳ್ಳತನ ಅಥವಾ ಬೇರೆ ಯಾವುದೇ ರೀತಿಯಲ್ಲಿ ಮೊಬೈಲ್‌ ಫೋನ್‌ ಕಳೆದುಕೊಂಡರೆ ಅದನ್ನು ಬ್ಲಾಕ್‌ ಮಾಡಲು ಕೇಂದ್ರ ಸರಕಾರದ ದೂರಸಂಪರ್ಕ ಇಲಾಖೆ ಜಾರಿಗೆ ತಂದಿರುವ ಹೊಸ ವಿಧಾನವೇ ಸಿಇಐಆರ್‌ ಪೋರ್ಟಲ್‌(CEIR- Central Equipment Identity Registration Portal). ಮೊಬೈಲ್‌ ಫೋನ್‌ ಕಳೆದುಹೋದ ಕೂಡಲೇ ಹತ್ತಿರದ ಪೊಲೀಸಂ ಠಾಣೆಯಲ್ಲಿ ಅಥವಾ ಕೆಎಸ್‌ಪಿ ಆಯಪ್‌ನಲ್ಲಿ ದೂರು ಸಲ್ಲಿಸಿ ಸ್ವೀಕೃತಿ/ ಡಿಜಿಟಲ್‌ ಇ-ಸ್ವೀಕೃತಿ ಪಡೆದುಕೊಳ್ಳಬೇಕು. ಕಳೆದುಕೊಂಡಿರುವ ಮೊಬೈಲ್‌ ನಂಬರ್‌ನ ನಕಲಿ ಸಿಮ್‌ ಕಾರ್ಡ್‌ನ್ನು ಈ ಹಿಂದೆ ಸೇವೆ ಪಡೆಯುತ್ತಿದ್ದ ಸರ್ವಿಸ್‌ ಪ್ರೊವೈಡರ್‌ನಿಂದ(ಉದಾ: ಏರ್‌ಟೆಲ್‌, ಜಿಯೋ, ಬಿಎಸ್‌ಎನ್‌ಎಲ್‌ ಇತ್ಯಾದಿ) ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಓಟಿಪಿ ಪಡೆಯಲು ಅದನ್ನು ಚಾಲನೆ ಮಾಡಿಟ್ಟುಕೊಳ್ಳಬೇಕು. ಅನಂತರ https://www.ceir.gov.in ವೆಬ್‌ಸೈಟ್‌ನಲ್ಲಿ ಕಳೆದುಕೊಂಡ ಮೊಬೈಲ್‌ ಫೋನ್‌ನ ಮಾಹಿತಿ ನಮೂದಿಸಬೇಕು. ಮಾಹಿತಿ ನಮೂದಿಸಿದ 24 ಗಂಟೆಗಳೊಳಗೆ ಮೊಬೈಲ್‌ಫೋನ್‌ ಬ್ಲಾಕ್‌ ಆಗುತ್ತದೆ. ಒಂದು ವೇಳೆ ಮೊಬೈಲ್‌ ಫೋನ್‌ ಪತ್ತೆಯಾದರೆ CEIR ಪೋರ್ಟಲ್‌ನಲ್ಲಿ ಲಾಗಿನ್‌ ಆಗಿ ಅನ್‌ಬ್ಲಾಕ್‌ ಮಾಡಿ ಉಪಯೋಗಿಸಬಹುದು. ಡಿಸಿಪಿಗಳಾದ ಅಂಶುಕುಮಾರ್‌, ದಿನೇಶ್‌ ಕುಮಾರ್‌, ಎಸಿಪಿ ಪಿ.ಎ ಹೆಗಡೆ ಉಪಸ್ಥಿತರಿದ್ದರು.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

20 minutes ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

39 minutes ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

2 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

2 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

2 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

2 hours ago