ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಳ್ಳಬಟ್ಟಿ ಸಾರಾಯಿ ಉತ್ಪಾದನೆ ಮತ್ತು ಸೇವನೆಗೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಫೆ. 02ರ ಬುಧವಾರ ಕಳ್ಳಭಟ್ಟಿ ನಿರ್ಮೂಲನೆ ಮತ್ತು ಅಕ್ರಮ ಹೆಂಡ ತಯಾರಿಕೆ ಹಾಗೂ ವಿಷಪೂರಿತ ಮದ್ಯ ಸೇವನೆಗಳ ನಿರ್ಮೂಲನೆಯ ಬಗ್ಗೆ ಅಧಿಕಾರಿಗಳೊಂದಿಗೆ ವಚ್ರ್ಯುಯಲ್ ಮೂಲಕ ಸಭೆಯನ್ನು ನಡೆಸಿ ಮಾತನಾಡಿದರು.
ಅಕ್ರಮ ಮದ್ಯ ಮಾರಾಟ, ಕಳ್ಳಭಟ್ಟಿ ತಯಾರಿಕೆ, ಗೇರು ಹಣ್ಣಿನ ಕಳ್ಳಭಟ್ಟಿ ತಯಾರಿಕೆ ಮತ್ತು ವಿಷಪೂರಿತ ಮದ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಂತೆ ಮತ್ತು ರಾಜಸ್ವ ಸೋರಿಕೆಯಾಗದಂತೆ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಅಬಕಾರಿ ಉಪ ಆಯುಕ್ತರಾದ ಬಿಂದುಶ್ರೀ, ಅರಣ್ಯಾಧಿಕಾರಿಗಳು ಮತ್ತು ಸಂಬಂಧಿಸಿದ ಇತರೆ ಅಧಿಕಾರಿಗಳು ಹಾಜರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…