ಮಂಗಳೂರು :ಕಾಂಗ್ರೆಸ್‌ ಮುಕ್ತ ಭಾರತ ಗುರಿಯನ್ನು ಬಿಜೆಪಿ ಸಾಧಿಸಿದೆ, ದೇಶದಲ್ಲಿ ಜನರ ಏಕೈಕ ʼರಾಜಕೀಯ ಆಯ್ಕೆʼ ಎಂದರೆ ಬಿಜೆಪಿ ಮಾತ್ರ : ಡಾ.ಸಿ.ಎನ್.ಅಶ್ವತ್ಥನಾರಾಯಣ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು :ಕಾಂಗ್ರೆಸ್‌ ಮುಕ್ತ ಭಾರತ ಗುರಿಯನ್ನು ಬಿಜೆಪಿ ಸಾಧಿಸಿದೆ, ದೇಶದಲ್ಲಿ ಜನರ ಏಕೈಕ ʼರಾಜಕೀಯ ಆಯ್ಕೆʼ ಎಂದರೆ ಬಿಜೆಪಿ ಮಾತ್ರ : ಡಾ.ಸಿ.ಎನ್.ಅಶ್ವತ್ಥನಾರಾಯಣ – Vishwanews24

ಮಂಗಳೂರು: ದೇಶದಲ್ಲಿ ಕಾಂಗ್ರೆಸ್‌ ಮುಕ್ತ ಭಾರತ ಗುರಿಯನ್ನು ಬಿಜೆಪಿ ಸಾಧಿಸಿದೆ. ಮುಂದಿನ‌ ದಿನಗಳಲ್ಲಿ ಗ್ರಾಮೀಣ ಮಟ್ದಲ್ಲೂ ಕಾಂಗ್ರೆಸ್‌ ಮುಕ್ತ ಗುರಿಯನ್ನು ನಮ್ಮ ಪಕ್ಷ ಸಾಧಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು; ಕಾಂಗ್ರೆಸ್‌ ಪಕ್ಷವು ಇದೀಗ ದೇಶ ರಾಜಕಾರಣದಲ್ಲಿ ಅಪ್ರಸ್ತುತವಾಗಿದೆ. ನಾಯಕತ್ವದ ಕೊರತೆ, ಜನವಿರೋಧಿ ನೀತಿಗಳು, ರಾಷ್ಟ್ರದ ಹಿತಾಸಕ್ತಿ ಬಗ್ಗೆ ರಾಜಿ.. ಇತ್ಯಾದಿ ಕಾರಣಗಳಿಂದ ಆ ಪಕ್ಷವು ಜನಮಾನಸದಿಂದ ಮರೆಯಾಗಿಬಿಟ್ಟಿದೆ. ಹೀಗಾಗಿ ದೇಶದಲ್ಲಿ ಜನರ ಏಕೈಕ ʼರಾಜಕೀಯ ಆಯ್ಕೆʼ ಎಂದರೆ ಬಿಜೆಪಿ ಮಾತ್ರ ಎಂದರು.

ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಬಿಜೆಪಿಯು ಕಾಂಗ್ರೆಸ್‌ ವಿರುದ್ಧ ತನ್ನೆಲ್ಲ ಗುರಿಗಳನ್ನು ಸಾಧಿಸಿದೆ. ಇದೀಗ ಪಂಚಾಯಿತಿ ಮಟ್ಟದಲ್ಲೂ ಆ ಪಕ್ಷವನ್ನು ಮೂಲೋತ್ಪಾಟನೆ ಮಾಡುವುದು ನಿಶ್ಚಿತ. ಆ ನಿಟ್ಟಿನಲ್ಲಿ ಪಕ್ಷವು ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಲೋಕಮಾನ್ಯ ತಿಲಕರು ಹೇಳಿದ ಸ್ವರಾಜ್ಯ ಹಾಗೂ ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರ ಮಾಡಲು ಎಪ್ಪತ್ತು ವರ್ಷಗಳ ನಂತರ ಬಿಜೆಪಿ ಬರಬೇಕಾಯಿತು ಎಂದು ಡಿಸಿಎಂ ಹೇಳಿದರು.