ಮಂಗಳೂರು: ದೇಶದಲ್ಲಿ ಕಾಂಗ್ರೆಸ್ ಮುಕ್ತ ಭಾರತ ಗುರಿಯನ್ನು ಬಿಜೆಪಿ ಸಾಧಿಸಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಮಟ್ದಲ್ಲೂ ಕಾಂಗ್ರೆಸ್ ಮುಕ್ತ ಗುರಿಯನ್ನು ನಮ್ಮ ಪಕ್ಷ ಸಾಧಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು; ಕಾಂಗ್ರೆಸ್ ಪಕ್ಷವು ಇದೀಗ ದೇಶ ರಾಜಕಾರಣದಲ್ಲಿ ಅಪ್ರಸ್ತುತವಾಗಿದೆ. ನಾಯಕತ್ವದ ಕೊರತೆ, ಜನವಿರೋಧಿ ನೀತಿಗಳು, ರಾಷ್ಟ್ರದ ಹಿತಾಸಕ್ತಿ ಬಗ್ಗೆ ರಾಜಿ.. ಇತ್ಯಾದಿ ಕಾರಣಗಳಿಂದ ಆ ಪಕ್ಷವು ಜನಮಾನಸದಿಂದ ಮರೆಯಾಗಿಬಿಟ್ಟಿದೆ. ಹೀಗಾಗಿ ದೇಶದಲ್ಲಿ ಜನರ ಏಕೈಕ ʼರಾಜಕೀಯ ಆಯ್ಕೆʼ ಎಂದರೆ ಬಿಜೆಪಿ ಮಾತ್ರ ಎಂದರು.
ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಬಿಜೆಪಿಯು ಕಾಂಗ್ರೆಸ್ ವಿರುದ್ಧ ತನ್ನೆಲ್ಲ ಗುರಿಗಳನ್ನು ಸಾಧಿಸಿದೆ. ಇದೀಗ ಪಂಚಾಯಿತಿ ಮಟ್ಟದಲ್ಲೂ ಆ ಪಕ್ಷವನ್ನು ಮೂಲೋತ್ಪಾಟನೆ ಮಾಡುವುದು ನಿಶ್ಚಿತ. ಆ ನಿಟ್ಟಿನಲ್ಲಿ ಪಕ್ಷವು ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಲೋಕಮಾನ್ಯ ತಿಲಕರು ಹೇಳಿದ ಸ್ವರಾಜ್ಯ ಹಾಗೂ ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರ ಮಾಡಲು ಎಪ್ಪತ್ತು ವರ್ಷಗಳ ನಂತರ ಬಿಜೆಪಿ ಬರಬೇಕಾಯಿತು ಎಂದು ಡಿಸಿಎಂ ಹೇಳಿದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…