ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್ ಸಭಾಂಗಣದಲ್ಲಿ ಗುರುವಾರ ನಡೆದ ತುರ್ತು ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಪ್ರಕಟಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಸ್ಲಿಂ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ ಸಮುದಾಯಕ್ಕೆ ಆಗಿರುವ ಅನ್ಯಾಯ, ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆ ಯ ಬಗ್ಗೆ ಮಾತನಾಡುತ್ತಿದ್ದಂತೆ ಕಾರ್ಯಕರ್ತರು ವೇದಿಕೆಗೆ ನುಗ್ಗಿ ”ಬೇಕೆ ಬೇಕು ನಮಗೆ ನ್ಯಾಯಬೇಕು” ಎಂದು ಆಗ್ರಹಿಸಿದರು.
ಎಂ ಎಸ್ ಮುಹಮ್ಮದ್, ಮಾಜಿ ಕಾರ್ಪೊರೇಟರ್ ಅಬ್ದುಲ್ ರವೂಫ್, ಸುಹೈಲ್ ಕಂದಕ್ ಜನಸಮೂಹವನ್ನು ಸಮಾಧಾನ ಪಡಿಸಲು ಯತ್ನಿದರು. ಆದರೆ ಕಾರ್ಯಕರ್ತರು ಪಟ್ಟು ಬಿಡಲಿಲ್ಲ. ಕೊನೆಗೆ ನಾಯಕರು ನಮ್ಮ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಶಾಹುಲ್ ಹಮೀದ್ ಸಾಮೂಹಿಕ ರಾಜೀನಾಮೆ ನೀಡಿರುವುದಾಗಿ ಪ್ರಕಟಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…