ಮಂಗಳೂರು: ‘ಕಾಂಗ್ರೆಸ್ ಪಕ್ಷವು ಯಾವುದೇ ಜಾತಿಯನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದಿಲ್ಲ. ಜಾತಿ ಆಧಾರದಲ್ಲಿ ಮುಖ್ಯಮಂತ್ರಿ ಆಗಬಯಸುವವರು ತಮ್ಮ ಜಾತಿ ಸಂಘಟನೆ ಕಟ್ಟಿ, ಅದರ ಮೂಲಕವೇ ಆಸೆ ತೀರಿಸಿಕೊಳ್ಳಲಿ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಜಾತಿ ಧರ್ಮಗಳ ನಾಯಕರಿಗೂ ಅಧಿಕಾರದ ಕನಸು ಇದ್ದೇ ಇರುತ್ತದೆ. ಜಾತಿ ಧರ್ಮದ ಹೆಸರಿನಲ್ಲಿ ಕಾಂಗ್ರೆಸ್ ಯಾವತ್ತೂ ರಾಜಕಾರಣ ಮಾಡಿಲ್ಲ. ಕಾಂಗ್ರೆಸ್‌ಗೆ ಬಹುಮತ ಬಂದರೆ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರು ಪಕ್ಷದ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ತೀರ್ಮಾನ ಮಾಡುತ್ತಾರೆ’ ಎಂದರು.
‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಸಲುವಾಗಿ ಕೈಗೊಳ್ಳುವ ‘ಸಿದ್ದರಾಮೋತ್ಸವ’ ಪಕ್ಷದ ಕಾರ್ಯಕ್ರಮವಲ್ಲ. ಅವರ ಅಭಿಮಾನಿಗಳು ಸೇರಿ ನಡೆಸುವ ಕಾರ್ಯಕ್ರಮ. ಅದರ ವೆಚ್ಚವನ್ನೂ ಅಭಿಮಾನಿಗಳೇ ಭರಿಸುತ್ತಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ತರಗತಿಗಳು ಆರಂಭವಾದ ಬಳಿಕವೂ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ತಲುಪಿಲ್ಲ. ರಷ್ಯಾ–ಉಕ್ರೇನ್ ಯುದ್ಧದಿಂದಾಗಿ ಕಾಗದ ಪೂರೈಕೆ ವ್ಯತ್ಯಯವಾಗಿದ್ದರಿಂದ ಪಠ್ಯ ಪುಸ್ತಕ ಮುದ್ರಣ ವಿಳಂಬವಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ನಮ್ಮಲ್ಲಿಗೆ ಕಾಗದ ಪೂರೈಕೆ ಆಗುವುದು ಕೆನಡಾದಿಂದ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದಂತೆ ಹೇಳಿಕೆ ಕೊಡುವ ಬದಲು ಸರ್ಕಾರ ವಿದ್ಯಾರ್ಥಿಗಳಿಗೆ ಆದಷ್ಟು ಬೇಗ ಪಠ್ಯ ಪುಸ್ತಕ ಪೂರೈಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
‘ಕಡಲ್ಕೊರೆತ ತಡೆಯಲು ಮುನ್ನೆಚ್ಚರಿಕೆ ವಹಿಸದ ಕಾರಣ ಉಳ್ಳಾಲ ಹಾಗೂ ಸುರತ್ಕಲ್ ಪ್ರದೇಶದಲ್ಲಿ ಈ ಬಾರಿ ಕಡಲ್ಕೊರೆತದ ಹಾವಳಿ ಹೆಚ್ಚಾಗಿದೆ. ಈ ಸಲ ಮಾನವ ನಿರ್ಮಿತ ತಪ್ಪುಗಳಿಂದಾಗಿಯೇ ಸಮಸ್ಯೆ ಉಂಟಾಗಿದೆ’ ಎಂದು ಬಿ.ಕೆ.ಹರಿಪ್ರಸಾದ್ ಆರೋಪಿಸಿದರು.
‘ಸ್ಮಾರ್ಟ್ ಸಿಟಿಯಾಗಿದ್ದ ಮಂಗಳೂರನ್ನು ದುರಂತಮಯ ನಗರವನ್ನಾಗಿ ಪರಿವರ್ತಿಸಿದ್ದಾರೆ. ಕಂಕನಾಡಿ– ಪಡೀಲ್ ಬಳಿ ಮಳೆನೀರು ರಸ್ತೆಯಲ್ಲೇ ನಿಲ್ಲುವ ಸಮಸ್ಯೆಯನ್ನೂ ಬಗೆಹರಿಸಿಲ್ಲ’ ಎಂದು ದೂರಿದರು.
ಪಕ್ಷದ ಮುಖಂಡರಾದ ಐವನ್ ಡಿಸೋಜ, ಜೆ.ಆರ್.ಲೋಬೋ, ಶಶಿಧರ್ ಹೆಗ್ಡೆ, ಶಾಹುಲ್ ಹಮೀದ್, ಟಿ.ಕೆ.ಸುಧೀರ್, ಅಬ್ದುಲ್ ರವೂಫ್, ಶಾಹುಲ್ ಹಮೀದ್, ನವೀನ್ ಡಿಸೋಜ, ನೀರಜ್‌ಪಾಲ್, ಶುಭೋದಯ ಆಳ್ವ ಮತ್ತಿತರರು ಇದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…