Featured

ಮಂಗಳೂರು : ಕಾಂಗ್ರೆಸ್ ಸರಕಾರ ಯಾವುದೇ ರೀತಿಯ ಕಠಿಣ ಕ್ರಮ ಕೈಗೊಳ್ಳದಿರುವ ಕಾರಣ ಮತಾಂಧ ಶಕ್ತಿಗಳು ಮತ್ತೆ ಎದ್ದು ನಿಂತಿವೆ : ನಳಿನ್  – Vishwanews24

ಮಂಗಳೂರು : ಶಿವಮೊಗ್ಗದಲ್ಲಿ ನಡೆದ ಘಟನೆ ಗಮನಿಸಿದರೆ ಮತಾಂಧ ಶಕ್ತಿಗಳ ಕೈವಾಡ ಕಂಡು ಬರುತ್ತಿದೆ : ನಳಿನ್

ಮಂಗಳೂರು, : ಶಿವಮೊಗ್ಗದಲ್ಲಿ ಮೀಲಾದುನ್ನಬಿ ಮೆರವಣಿಗೆಯ ಸಂದರ್ಭ ನಡೆದ ಘಟನೆ ಗಮನಿಸಿದರೆ ಮತಾಂಧ ಶಕ್ತಿಗಳ ಕೈವಾಡ ಕಂಡು ಬರುತ್ತಿದೆ. ಮೀಲಾದ್ ಮೆರವಣಿಗೆ ಹೆಸರಿನಲ್ಲಿ ಹಿಂದೂ ಧರ್ಮೀಯರ ಅಂಗಡಿಗಳ ಲೂಟಿ, ಮನೆಗಳಿಗೆ ದಾಳಿ ನಡೆದಿದ್ದು, ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಮಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ನ ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಕಿಸ್ತಾನದ ಧ್ವಜ ಹಾರಾಡಿದ್ದು, ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿತ್ತು. ಆ ಸಂದರ್ಭ ಯಾವುದೇ ರೀತಿಯ ಕಠಿಣ ಕ್ರಮ ಕೈಗೊಳ್ಳದಿರುವ ಕಾರಣ ಮತಾಂಧ ಶಕ್ತಿಗಳು ಮತ್ತೆ ತಮ್ಮ ಎದ್ದು ನಿಂತಿವೆ ಎಂದು ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಭಯೋತ್ಪಾದನೆಯ ಚಟುವಟಿಕೆಗಳು ಕಾಣುತ್ತಿವೆ. ಹರ್ಷ ಹತ್ಯೆ, ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಎನ್ ಐಎ ದಾಳಿ ವೇಳೆ ಅತಿ ಹೆಚ್ಚು ಆತಂಕ ಕಂಡುಬಂದಿರುವುದು ತೀರ್ಥ ಹಳ್ಳಿಯಲ್ಲಿ. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಸಂದರ್ಭದಲ್ಲೂ ತೀರ್ಥಹಳ್ಳಿಯಲ್ಲಿ ಭಯೋತ್ಪಾದನಾ ಚಟುವಟಿಕೆ ಆರಂಭ ಆಗಿದೆ ಎಂಬುದು ತನಿಖೆಯಿಂದ ತಿಳಿದಿದೆ. ಭಟ್ಕಳ ಬ್ರದರ್ಸ್ ಹೆಸರಿನಲ್ಲಿ ಭಟ್ಕಳದಲ್ಲಿ ಭಯೋತ್ಪದನಾ ಚಟುವಟಿಕೆ ಆರಂಭವಾಯಿತು. ತೀರ್ಥಹಳ್ಳಿ ಬ್ರದರ್ಸ್ ಹೆಸರಿನಲ್ಲಿ ಮತಾಂಧ ಶಕ್ತಿಗಳು ಭಯೋತ್ಪಾದನಾ ಚಚುವಟಿಕೆಗಳನ್ನು ಪ್ರಾರಂಭಿಸಿರುವುದು ಎನ್ ಐಎ ತನಿಖೆಯಿಂದ ಸ್ಪಷ್ಟವಾಗಿರುವುವುದು ಮಾಧ್ಯಮದಲ್ಲಿ ಕಂಡಿರುವುದಾಗಿ ಅವರು ಹೇಳಿದರು.

ಶಿವಮೊಗ್ಗ ಸೂಕ್ಷ್ಮ ಜಿಲ್ಲೆಯಾಗಿದ್ದು, ಇಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸರಕಾರ ಮುನ್ನಚಚ್ಚರಿಕೆ ವಹಿಸಬೇಕಾಗಿತ್ತು. ಸರಕಾರ ಕಠಿಣ ಕ್ರಮ ವಹಿಸದಿರುವ ಕಾರಣ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಈ ರೀತಿಯ ಘಟನೆಗಳು ಮರುಕಳಿಸದ ರೀತಿಯಲ್ಲಿ ತನಿಖೆ ಮಾಡಬೇಕು. ಈ ಘಟನೆಯಲ್ಲಿ ಯಾರು ಭಾಗಿಯಾಗಿದ್ದಾರೋ ಅಂತಹವರನ್ನು ಬಂಧಿಸಬೇಕು. ಘಟನೆಗಳಲ್ಲಿ ಆತಂಕವಾದ, ಭಯೋತ್ಪದನಾ ಚಟುವಟಿಕೆಗಳಿವೆಯೇ ಎಂದು ಕಂಡು ಹಿಡಿಯಬೇಕು ಎಂದು ನಳಿನ್ ಒತ್ತಾಯಿಸಿದರು.

ರಾಜ್ಯದಲ್ಲಿ ಗೃಹ ಸಚಿವರು ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಮತ ಬೇಟೆಗಾಗಿ ಇಂತಹ ಭಯೋತ್ಪದನಾ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಫಲರಾಗಿದ್ದಾರೆ. ಹಿಂದೆ ಪ್ರವೀಣ್ ನೆಟ್ಟಾರು, ಹರ್ಷ ಹತ್ಯೆ ಎನ್ ಐಎ ತನಿಖೆ ಮೂಲಕ ಕಠಿಣ ಕ್ರಮ ವಹಿಸಲಾಗಿತ್ತು. ಡಿಜೆ ಹಳ್ಳಿ, ಕೆಜೆ ಹಳ್ಳಿ, ಹುಬ್ಬಳ್ಳಿ ಗಲಾಟೆ ಸಂದರ್ಭದಲ್ಲಿ ಬಿಜೆಪಿ ಸರಕಾರ ಕಠಿಣ ಕ್ರಮ ವಹಿಸಿದ್ದ ಕಾರಣ ಇಂತಹ ಆತಂಕವಾದ ಹತೋಟಿಗೆ ಬಂದಿತ್ತು ಎಂದವರು ಹೇಳಿದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago