ಮಂಗಳೂರು, : ರಾಜ್ಯ ಸಭಾ ಸದಸ್ಯ, ರಾಷ್ಟ್ರೀಯ ಕಾಂಗ್ರೆಸ್‌ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಯೋಗ ಮಾಡುವ ಸಂದರ್ಭ ಜಾರಿ ಬಿದ್ದು ಗಾಯಗೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜು.18 ರ ಭಾನುವಾರ ಬೆಳಗ್ಗೆ ಯೋಗ ಮಾಡುವ ವೇಳೆ ಆಸ್ಕರ್ ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದಾರೆ. ಆದರೆ ಆ ವೇಳೆ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲವೆಂದು ನಿರ್ಲಕ್ಷಿಸಿದ್ದರು. ಬಳಿಕ ಅಂದೇ ಸಂಜೆ ಮಾಮೂಲಿ ಆರೋಗ್ಯ ತಪಾಸಣೆಗೆಂದು ಅವರು ಯೆನೆಪೊಯ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ವೈದ್ಯರು ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿರುವುದು ತಿಳಿದುಬಂದಿದೆ. ಮಾತ್ರವಲ್ಲದೆ ಆರೋಗ್ಯದಲ್ಲೂ ಏರುಪೇರು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಕರ್ ಫೆರ್ನಾಂಡಿಸ್ ಅವರಿಗೆ ಕೂಡಲೇ ಶಸ್ತ್ರಚಿಕಿತ್ಸೆ ಮಾಡುವ ಅಗತ್ಯವಿದೆ ಎಂಬುದಾಗಿ ವೈದ್ಯರು ಹೇಳಿದ್ದಾರೆ. ಸದ್ಯ ಅವರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…