Featured

ಮಂಗಳೂರು : ಕಾಂತಾರ ಚಿತ್ರ ಸಕ್ಸಸ್‌ ಹಿನ್ನೆಲೆ ; ಹರಕೆ ಸಲ್ಲಿಸಿದ ರಿಷಬ್ ಶೆಟ್ಟಿ ಟೀಂ – vishwanews24

ಮಂಗಳೂರು : ಕಾಂತಾರ ಚಿತ್ರ ಸಕ್ಸಸ್‌ ಹಿನ್ನೆಲೆ ; ಹರಕೆ ಸಲ್ಲಿಸಿದ ರಿಷಬ್ ಶೆಟ್ಟಿ ಟೀಂ

ತುಳುನಾಡಿಗೆ ಬಂದು ಹರಕೆ ನೇಮೋತ್ಸವ ಸಲ್ಲಿಸಿದ ಕಾಂತಾರ ಚಿತ್ರತಂಡ

ಕಾಂತಾರ ಚಾಪ್ಟರ್ 1  ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ನೂರಾರು ಕೋಟಿ ಲಾಭ ಗಳಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿಟ್ ನೀಡಿದ ಚಿತ್ರದ ಮೂಲ ತುಳುನಾಡಿನ ದೈವಾರಾಧನೆ. ಚಿತ್ರದ ಯಶಸ್ಸಿನ ಹಿನ್ನೆಲೆ ವಾರಾಹಿ ಪಂಜುರ್ಲಿ ದೈವಕ್ಕೆ ಮಂಗಳೂರಿನಲ್ಲಿ ಕಾಂತಾರ ಚಿತ್ರತಂಡದಿಂದ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು.

ಕಾಂತಾರ ಸಿನಿಮಾ ಕನ್ನಡ ಚಿತ್ರ ರಂಗದ ದೊಡ್ಡ ಮೈಲುಗಲ್ಲು. ರಿಷಬ್ ಶೆಟ್ಟಿಯನ್ನು  ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಚಿತ್ರ. ಕಾಂತಾರ ಎರಡು ಚಾಪ್ಟರ್‌ಗಳ ಕಥಾ ಹಂದರವೇ ತುಳುನಾಡಿನ ದೈವ. ಕಾಂತಾರ ಚಾಪ್ಟರ್‌ 1 ಸಿನಿಮಾ‌ ಭರ್ಜರಿ ಯಶಸ್ಸು ಕಂಡು, ಚಿತ್ರತಂಡ ಗೆದ್ದು ಬಿಗಿದೆ. ನಿರ್ಮಾಪಕರಿಗೆ ನೂರಾರು ಕೋಟಿ ಲಾಭ ತಂದಿದೆ. ಹೀಗಾಗಿ, ಮಂಗಳೂರಿನ ಬಾರೆಬೈಲ್ ಶ್ರೀ ಅರಸು ಧರ್ಮ ಜಾರಂದಾಯ, ಬಂಟ ಹಾಗೂ ವಾರಾಹಿ ದೈಸ್ಥಾನದಲ್ಲಿ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು.

ಸಿನಿಮಾ ನಿರ್ಮಾಣಕ್ಕೂ ಮೊದಲು ಸಿನಿಮಾ ಯಶಸ್ವಿಗಾಗಿ ಪ್ರಾರ್ಥಿಸಿ ಚಿತ್ರತಂಡದವರು ಹರಕೆ ಹೊತ್ತಿದ್ದರು. ದೈವದ ಆಶೀರ್ವಾದದಿಂದ ಸಿನಿಮಾ ಯಶಸ್ಸು ಕಂಡಿದೆ. ಹೀಗಾಗಿ, ನಟ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್ ವತಿಯಿಂದ ಹರಕೆ ನೇಮೋತ್ಸವ ಸಲ್ಲಿಸಿದ್ರು. ದೈವದ ನೇಮೋತ್ಸವದಲ್ಲಿ ರಿಷಬ್ ಪತ್ನಿ ಪ್ರಗತಿ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಂಗದೂರು, ನಿರ್ದೇಶಕ ಸಂತೋಷ್ ಆನಂದ ರಾಮ್ ಸೇರಿದಂತೆ ಚಿತ್ರರಂಗದ ಹಲವು ಮಂದಿ ಭಾಗಿಯಾಗಿದ್ದರು. ದೈವದ ಪ್ರಸಾದ ಸ್ವೀಕರಿಸಿ ದೈವಾನುಗ್ರಹಕ್ಕೆ ಪಾತ್ರರಾದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago