ಮಂಗಳೂರು : ಕಾಟಾಚಾರದ ಭದ್ರತೆ ನನಗೆ ಬೇಕಿಲ್ಲ, ಕಲ್ಪಿಸಿದರೆ ಸರಿಯಾದ ಭದ್ರತೆ ನೀಡಲಿ : ಖಾದರ್ -Vishwanews24

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಏಕೈಕ ಕಾಂಗ್ರೇಸ್ ಶಾಸಕ, ಪ್ರಭಾವಿ ಕಾಂಗ್ರೆಸ್ ಮುಖಂಡ ಯು ಟಿ ಖಾದರ್ ಅವರ ಹತ್ಯೆಗೆ ಮೂಲಭೂತವಾದಿ ಸಂಘಟನೆಯೊಂದು ಸಂಚು ರೂಪಿಸಿರುವ ಆಘಾತಕಾರಿ ಮಾಹಿತಿ ಗುಪ್ತಚರ ಇಲಾಖೆ ಸರಕಾರಕ್ಕೆ ನೀಡಿದೆ. ಈ ಹಿನ್ನಲೆಯಲ್ಲಿ ಖಾದರ್ ಅವರಿಗೆ ಭದ್ರತೆ ನೀಡಲು ಸರಕಾರ ಮುಂದೆ ಬಂದಿದ್ದು, ಆದರೆ ಖಾದರ್ ಭದ್ರತೆ ನಿರಾಕರಿಸಿದ್ದಾರೆ.

ಮೈಸೂರಿನ ಕಾಂಗ್ರೇಸ್ ಶಾಸಕ ತನ್ವೀರ್ ಸೇಠ್ ಅವರ ಹತ್ಯೆಗೆ ಸಂಚು ರೂಪಿಸಿದಂತೆ ಸಂಘಟನೆಯೊಂದು ಖಾದರ್ ಹತ್ಯೆಗೆ ಸ್ಕೆಚ್ ಹಾಕಿದೆ ಎಂದು ಗುಪ್ತಚರ ಇಲಾಖೆ ಸರ್ಕಾರಕ್ಕೆ ತಿಳಿಸಿದೆ.

ಈ ಹಿನ್ನಲೆ ಖಾದರ್ ಅವರಿಗೆ ಭದ್ರತೆ ಹೆಚ್ಚು ಮಾಡಲು ಸರಕಾರ ಸೂಚಿಸಿದೆ. ಆದರೆ ಖಾದರ್ ನನಗೆ ಯಾವುದೇ ಜೀವಭಯ ಇಲ್ಲ ಎಂದು ಹೇಳಿ ಭದ್ರತೆಯನ್ನು ನಿರಾಕರಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಖಾದರ್ ನನಗೆ ಜೀವ ಬೆದರಿಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವತ: ಗೃಹ ಸಚಿವರು ನನಗೆ ಕರೆ ಮಾಡಿ ಹೇಳಿ ಭದ್ರತೆ ಪಡೆಯುವಂತೆ ಹೇಳಿದ್ದಾರೆ. ಆದರೆ ಓರ್ವ ಪೋಲಿಸ್ ಸಿಬ್ಬಂದಿಯನ್ನು ಭದ್ರತೆ ನೀಡಲು ಸರ್ಕಾರ ಮುಂದಾಗಿದೆ. ಇಂತಹ ಕಾಟಾಚಾರದ ಭದ್ರತೆ ನನಗೆ ಬೇಡ ಅಂತ ನಾನು ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾರೆ.

ಎಸಿಪಿ ಒಬ್ಬರು ಮನೆಗೆ ಬಂದು ಮಾತನಾಡಿದ್ದಾರೆ. ಭದ್ರತೆ ಕೊಟ್ಟರೆ ಸರಿಯಾಗಿ ಕೊಡಬೇಕು. ಒಬ್ಬ ಪೊಲೀಸರ ಭದ್ರತೆ ಕೊಟ್ಟು ಹೆಚ್ಚು ಕಡಿಮೆ ಯಾದರೆ ಯಾರು ಹೊಣೆ? ತನ್ವೀರ್ ಸೇಟ್ ಅವರಿಗೂ ಓರ್ವ ಗನ್ ಮೆನ್ ಕೊಟ್ಟಿದ್ದರು. ಘಟನೆಯಾದ ನಂತರ ಆ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಇದರಲ್ಲಿ ಆತನ ತಪ್ಪು ಏನು? ಓರ್ವ ಪೊಲೀಸ್ ಭದ್ರತೆಗೆ ನಿಯೋಜಿಸಿದರೆ ಆತ 8 ಗಂಟೆ ಕೆಲಸ ಮುಗಿಸಿ ಹೋಗುತ್ತಾನೆ. ಆಮೇಲೆ ಏನು ಮಾಡುವುದು? ನನಗೆ ಬೆದರಿಕೆ ಇದೆ ಎಂದು ಗೃಹ ಸಚಿವರೆ ಹೇಳಿದ್ದಾರೆ. ಆದರೆ ಸೂಕ್ತ ಭದ್ರತೆ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಾನು ಶಾಸಕನಾಗಿ ಯಾವತ್ತು ಗನ್ ಮನ್ ಇಟ್ಟುಕೊಂಡಿಲ್ಲ. ಈಗ ಓರ್ವ ಸಿಬ್ಬಂದಿಯನ್ನು ದಿನದ 8 ಗಂಟೆಯ ಕಾಲ ಜೊತೆಗಿಟ್ಟುಕೊಂಡು ಅವನಿಗೆ ನಾನು ತೊಂದರೆ ನೀಡುವುದಿಲ್ಲ. ಕಾಟಾಚಾರದ ಭದ್ರತೆ ನನಗೆ ಬೇಕಿಲ್ಲ. ಕಲ್ಪಿಸಿದರೆ ಸರಿಯಾದ ಭದ್ರತೆ ನೀಡಲಿ ಎಂದು ಹೇಳಿ ಸರ್ಕಾರದ ವಿರುದ್ಧ ಖಾದರ್ ಹರಿಹಾಯ್ದಿದ್ದಾರೆ.

 

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

8 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

14 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

14 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

15 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

17 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

17 hours ago