Featured

ಮಂಗಳೂರು: ಕಾನೂನಿನ ನೆಪದಲ್ಲಿ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಡ್ಡಿ ;  ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಸೆ. 9 ರಂದು ಬೃಹತ್ ಜನಾಗ್ರಹ ಸಭೆ – vishwanews24

ಮಂಗಳೂರು: ಕಾನೂನಿನ ನೆಪದಲ್ಲಿ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪೊಲೀಸರ ಅಡ್ಡಿ ;  ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಸೆ. 9 ರಂದು ಬೃಹತ್ ಜನಾಗ್ರಹ ಸಭೆ

ಮಂಗಳೂರು: ಕಾನೂನಿನ ನೆಪದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೊಲೀಸರು ಅಡ್ಡಿಪಡಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಸೆಪ್ಟೆಂಬರ್ 9 ರಂದು ಬೃಹತ್ ಜನಾಗ್ರಹ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಂಗಳೂರಿನ ಶರವು ದೇವಸ್ಥಾನ ಬಳಿ ಬಾಲಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ನಡೆದ ಸಮಾಲೋಚನ ಸಭೆಯಲ್ಲಿ ಈ ಕುರಿತಂತೆ ನಿರ್ಣಯ ಕೈಗೊಳ್ಳಲಾಗಿದೆ. ಈ ಸಮಾಲೋಚನ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಮಾತ್ರವಲ್ಲದೆ ಕೆಲವೊಂದು ಕಡೆ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸೆಪ್ಟೆಂಬರ್ 9 ಮಂಗಳವಾರ ಬೃಹತ್ ಜನಾಗ್ರಹ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಿ ಎಸ್ ಪ್ರಕಾಶ್, ವಿಶ್ವ ಹಿಂದೂ ಪರಿಷತ್ ಪ್ರಮುಖರಾದ ಡಾ ಎಂಬಿ ಪುರಾಣಿಕ್, ಶರಣ್ ಪಂಪ್ ವೆಲ್, ಎಚ್ ಕೆ ಪುರುಷೋತ್ತಮ, ಶಿವಾನಂದ ಮೆಂಡನ್, ರಂಗಭೂಮಿ /ಯಕ್ಷಗಾನ ಕಲಾವಿದರಾದ ಡಾ ದೇವದಾಸ್ ಕಾಪಿಕಾಡ್, Ln ಕಿಶೋರ್ ಡಿ ಶೆಟ್ಟಿ, ವಿಜಯ ಕುಮಾರ್ ಕೊಡಿಯಾಲ್ ಬೈಲ್, ಭೋಜರಾಜ್ ವಾಮಂಜೂರು, ಸತೀಶ್ ಶೆಟ್ಟಿ ಪಟ್ಲಾ, ತಮ್ಮ ಲಕ್ಷ್ಮಣ್ ಕುಮಾರ ಮಲ್ಲೂರು /ರವಿ ಅಲೆವುರಾಯ/ಕೃಷ್ಣ ಮಂಜೇಶ್ವರ .ದೈವ ಆರಾಧಕರಾದ ದಯಾನಂದ್ ಕತ್ತಲ್ ಸಾರ್, ಸೌಂಡ್ಸ್ ಮತ್ತು ಲೈಟಿಂಗ್ಸ್ ಸಂಸ್ಥೆಯ ಅದ್ಯಕ್ಷ ಧನರಾಜ್ .ಅಶೋಕ್ ಕುಮಾರ ಜೊತೆಗೆ ಹಲವಾರು ರಂಗಭೂಮಿ ಕಲಾವಿದರು. ಹಿಂದೂ ಸಂಘಟನೆ ಕಾರ್ಯಕರ್ತರು ಈ ಸಭೆಯಲ್ಲಿ ಪಾಲ್ಗೊಂಡು ಅಭಿಪ್ರಾಯ ತಿಳಿಸಿದರು. ಸಂಘಟನೆಯ ಪ್ರಮುಖರಾದ ಪ್ರಕಾಶ್ PS ಮತ್ತು ಎಂ ಬಿ ಪುರಾಣಿಕರು ಮಾರ್ಗದರ್ಶನ ನೀಡಿದರು .

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago