Featured

ಮಂಗಳೂರು: ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಬಜರಂಗದಳ ಕಾರ್ಯಕರ್ತರಿಗೆ ನೋಟಿಸ್‌  : ದಿನೇಶ್‌ ಗುಂಡೂ ರಾವ್‌ – Vishwanews24

ಮಂಗಳೂರು: ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಬಜರಂಗದಳ ಕಾರ್ಯಕರ್ತರಿಗೆ ನೋಟಿಸ್‌  : ದಿನೇಶ್‌ ಗುಂಡೂ ರಾವ್‌

ಮಂಗಳೂರು: ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ವಿಚಾರಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂ ರಾವ್‌ ಪ್ರತಿಕ್ರಿಯೆ ನೀಡಿದ್ದಾರೆ.

ಬಜರಂಗದಳ ಕಾರ್ಯಕರ್ತರ ಮೇಲೆ ಅನೇಕ ಪ್ರಕರಣಗಳಿವೆ. ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ನೋಟಿಸ್‌ ನೀಡಲಾಗಿದೆ. ಇದರಲ್ಲಿ ಜಾತಿ, ಧರ್ಮ ನೋಡುವ ಪ್ರಶ್ನೆಯೇ ಇಲ್ಲ. ಇಂತಹ ವ್ಯಕ್ತಿಗಳ ವಿರುದ್ಧ ಬಿಜೆಪಿ ಬಿಜೆಪಿಯವರು ವಕಾಲತ್ತು ವಹಿಸುತ್ತಾರೆ ಎಂದರೆ ಅದಕ್ಕಿಂತ ಕೆಟ್ಟ ಸಂಗತಿ ಇನ್ನೊಂದಿಲ್ಲ ಎಂದರು.

ನಮ್ಮ ಪೊಲೀಸರಿಗೆ ತಪ್ಪು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ. ಇದೇ ರೀತಿಯ ಅಪರಾಧ ಹಿನ್ನಲೆಯ 65 ಜನರನ್ನು ಈಗಾಗಲೇ ದ.ಕ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ನಾವು ಹಸ್ತಕ್ಷೇಪ ಮಾಡುತ್ತಿಲ್ಲ. ಪೊಲೀಸರು ನಿಷ್ಪಕ್ಷಪಾತವಾಗಿ ಡ್ರಗ್ ಮಾಫಿಯಾ, ನೈತಿಕ ಪೊಲೀಸ್ ಗಿರಿ ವಿರುದ್ದ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ನಾಯಕರು ಶಾಂತಿಯ ವಾತಾವರಣ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago