ಮಂಗಳೂರು: ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ವಿಚಾರಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಬಜರಂಗದಳ ಕಾರ್ಯಕರ್ತರ ಮೇಲೆ ಅನೇಕ ಪ್ರಕರಣಗಳಿವೆ. ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ನೋಟಿಸ್ ನೀಡಲಾಗಿದೆ. ಇದರಲ್ಲಿ ಜಾತಿ, ಧರ್ಮ ನೋಡುವ ಪ್ರಶ್ನೆಯೇ ಇಲ್ಲ. ಇಂತಹ ವ್ಯಕ್ತಿಗಳ ವಿರುದ್ಧ ಬಿಜೆಪಿ ಬಿಜೆಪಿಯವರು ವಕಾಲತ್ತು ವಹಿಸುತ್ತಾರೆ ಎಂದರೆ ಅದಕ್ಕಿಂತ ಕೆಟ್ಟ ಸಂಗತಿ ಇನ್ನೊಂದಿಲ್ಲ ಎಂದರು.
ನಮ್ಮ ಪೊಲೀಸರಿಗೆ ತಪ್ಪು ಮಾಡಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ. ಇದೇ ರೀತಿಯ ಅಪರಾಧ ಹಿನ್ನಲೆಯ 65 ಜನರನ್ನು ಈಗಾಗಲೇ ದ.ಕ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ನಾವು ಹಸ್ತಕ್ಷೇಪ ಮಾಡುತ್ತಿಲ್ಲ. ಪೊಲೀಸರು ನಿಷ್ಪಕ್ಷಪಾತವಾಗಿ ಡ್ರಗ್ ಮಾಫಿಯಾ, ನೈತಿಕ ಪೊಲೀಸ್ ಗಿರಿ ವಿರುದ್ದ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ನಾಯಕರು ಶಾಂತಿಯ ವಾತಾವರಣ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…