ಮಂಗಳೂರು : ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದ ಆರೋಪಿ ನ್ಯಾಯವಾದಿಗೆ ಕೆ.ಎಸ್.ಎನ್ ರಾಜೇಶ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.
ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಧ್ರುವ, ಮಹಾಲಕ್ಷ್ಮಿ ಹೆಗ್ಡೆ, ಶಿವಾನಂದ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿಸಿಕೊಳ್ಳಲು. ರಾಜೇಶ್ ತಲೆಮರೆಸಿಕೊಳ್ಳಲು ಸಹಕರಿಸಿ ಬಂಧಿಸಲ್ಪಟ್ಟ ಅನಂತ್ ಭಟ್ ಗುರುವಾರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ಕಾನೂನು ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಆಗಸ್ಟ್ 8ರಿಂದ ನ್ಯಾಯವಾದಿಯ ಕರಂಗಲ್ಪಾಡಿ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆ ಸೇರಿದ್ದರು. ಈ ನಡುವೆ ವಕೀಲ ರಾಜೇಶ್ ಭಟ್ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಸೆ. 25ರಂದು ತನ್ನ ಚೇಂಬರ್‌ಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದರು. .ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜೇಶ್ ವಿರುದ್ಧ ಅ. 18ರಂದು ಎರಡು ಪ್ರಕರಣ ದಾಖಲಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…