ಮಂಗಳೂರು : ಇಂಟರ್ನ್‌ಶಿಪ್ ಗೆಂದು ಬರುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ಸ್ನೇಹಿತೆಗೆ ಬೆದರಿಕೆ ಹಾಕಿದ್ದಆರೋಪದಡಿ ಪವಿತ್ರಾ ಆಚಾರ್ಯ ಎಂಬುವರನ್ನ ಪೊಲೀಸರು ಬಂಧಿಸಿದ್ದಾರೆ.
ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾದ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇಂಟರ್ನ್‌ಶಿಪ್ ಗೆಂದು ಬರುತ್ತಿದ್ದ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇತ್ತೀಚಿಗೆ ದೂರು ದಾಖಲಿಸಿದ್ದರು. ಇನ್ನೊಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತೆಯ ಸ್ನೇಹಿತೆಗೆ ಬೆದರಿಕೆ ಹಾಕಿರುವ ಬಗ್ಗೆ ಪವಿತ್ರಾ ಆಚಾರ್ಯ ಎಂಬುವರ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ನೀಡುವ ಮುನ್ನ ಸಂತ್ರಸ್ತೆಗೆ ನ್ಯಾಯ ಕೊಡಿಸುತ್ತೇನೆಂದು ಉರ್ವ ಪೊಲೀಸ್ ಠಾಣೆಗೆ ಕರಿಸಿ ಠಾಣೆಯಲ್ಲಿ ಸಂತ್ರಸ್ತೆ ಜೊತೆ ಸಂಧಾನ ವೇಳೆ ಅಶೋಕನಗರದ ಜಾಗೃತ ಮಹಿಳಾ ವೇದಿಕೆಯ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯ ಸ್ನೇಹಿತೆಯಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಎಂಬ ಆರೋಪ ಪವಿತ್ರಾ ಆಚಾರ್ಯ ವಿರುದ್ಧ ಕೇಳಿ ಬಂದಿತ್ತು.ಈ ಹಿನ್ನಲೆಯಲ್ಲಿ ಪವಿತ್ರಾ ಆಚಾರ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಕರ್ತವ್ಯ ಲೋಪದಡಿ ಉರ್ವ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಕಲಾ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಮೋದ್ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಕಾನೂನು ಬಾಹಿರವಾಗಿ ಸಂತ್ರಸ್ತೆಯಿಂದ ಮುಚ್ಚಳಿಕೆ ಬರೆಸಿಕೊಂಡು ಹೆಬ್ಬೆಟ್ಟು ಸಹಿ ಹಾಕಿಸಿಕೊಳ್ಳಲಾಗಿದೆ ಹೀಗಾಗಿ ಕರ್ತವ್ಯ ಲೋಪವಾಗಿದೆ ಎಂದು ಪಿಎಸ್‌ಐ ಹಾಗೂ , ಹೆಡ್ ಕಾನ್ಸ್ಟೇಬಲ್ ಸಸ್ಪೆಂಡ್ ಮಾಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…