ಮಂಗಳೂರು,: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.
ಅಕ್ರಮ ಗೋಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕುವ ಶಾಸಕ ಡಾ. ಭರತ್ ಶೆಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಖಾದರ್, ಯಾರೂ ಕಾನೂನು ಮೀರಿ ಹೋಗಬಾರದು. ಬಕ್ರೀದ್ ಹಿನ್ನೆಲೆಯಲ್ಲಿ ಕುರ್ಬಾನಿಯಾಗಿ 14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ. ಹಾಗಾಗಿ ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಈ ಬಗ್ಗೆ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು.
ಪಿಎಸ್‌ಐ ಹಗರಣದ ಕುರಿತಂತೆ ಸಿಐಡಿಗೆ ಛೀಮಾರಿ ಹಾಕಿ ಅಕ್ರಮದ ತನಿಖೆಗೆ ಹೈಕೋರ್ಟ್ ಆದೇಶ ನೀಡುವುದು ಸರಕಾರದ ವೈಫಲ್ಯವಾಗಿದ್ದು, ನ್ಯಾಯಾಧೀಶರಿಗೆ ವರ್ಗಾವಣೆಯ ಬೆದರಿಕೆ ಹಾಕುವ ಪ್ರಕ್ರಿಯೆ ಗಂಭೀರ ವಿಚಾರ ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಂದ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…