Featured

ಮಂಗಳೂರು : ಕಾನೂನು ಸ್ಪಷ್ಟ, ಕಾರ್ಯಕ್ರಮಗಳಲ್ಲಿ ಡಿಜೆಗೆ ಅವಕಾಶವಿಲ್ಲ : ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಕಾನೂನು ಸ್ಪಷ್ಟ, ಕಾರ್ಯಕ್ರಮಗಳಲ್ಲಿ ಡಿಜೆಗೆ ಅವಕಾಶವಿಲ್ಲ : ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು : ಡಿಜೆ ಬಳಕೆಗೆ ಸಂಬಂಧಿಸಿ ಕಾನೂನು ಸ್ಪಷ್ಟವಾಗಿದೆ. ಹಾಗಾಗಿ ಕಾರ್ಯಕ್ರಮಗಳಲ್ಲಿ ಡಿಜೆಗೆ ಅವಕಾಶ ನೀಡಲಾಗದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸೇರುವ ಜನಸಂಖ್ಯೆ, ಸ್ಥಳ ಹಾಗೂ ಕಾರ್ಯಕ್ರಮದ ಅಗತ್ಯಕ್ಕೆ ಅನುಗುಣವಾಗಿ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಬೇಕೆಂಬ ದ.ಕ. ಜಿಲ್ಲಾ ಧ್ವನಿವರ್ಧಕ ಹಾಗೂ ದೀಪಾಲಂಕಾರ ಮಾಲಕರ ಸಂಘದ ಬೇಡಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಬೇಡಿಕೆಯಂತೆ ಧ್ವನಿವರ್ದಕಗಳಿಗೆ ಅವಕಾಶ ನೀಡದಿದ್ದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕಗಳನ್ನು ನೀಡುವುದಿಲ್ಲ ಎಂದು ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಬುಧವಾರ ಸುದ್ದಿಗೋಷ್ಟಿಯ ಮೂಲಕ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ, ಬಹಿಷ್ಕಾರ ಸೇರಿದಂತೆ ಯಾವುದೇ ರೀತಿಯ ನಿರ್ಧಾರಕ್ಕೆ ಅವರು ಮುಕ್ತರಾಗಿರುತ್ತಾರೆ. ಅದು ಅವರ ಪರಿಕರಗಳು ಮತ್ತು ಅವರ ನಿರ್ಧಾರ ಎಂದು ಹೇಳಿದ್ದಾರೆ.

ಸಾರ್ವಜನಿಕರು, ಹಿರಿಯ ನಾಗರಿಕರು, ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಸಂಭ್ರಮಾಚರಣೆಯನ್ನು ನಡೆಸಲು ಪೂರಕ ವ್ಯವಸ್ಥೆಗಳನ್ನು ಮಾಡಲಾಗುವುದು. ಈಗಾಗಲೇ ನಿಯಮಗಳಿವೆ. ಸಮರ್ಥನೀಯ ಕಾರಣಗಳಡಿ ಕೆಲವೊಂದು ನಿಯಮಗಳಿಗೆ ಕೆಲ ವಿನಾಯಿತಿ ನೀಡಬಹುದು. ಆದರೆ ವಿನಾಯಿತಿ ನಿಯಮವಾಗುವುದಿಲ್ಲ ಎಂದು ಸುಧೀರ್ ರೆಡ್ಡಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago