ಮಂಗಳೂರು: ಕಾಪು ಶಾಸಕ ಲಾಲಾಜಿ ಮೆಂಡನ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮೀನುಗಾರರ ವೇದಿಕೆ ಆಗ್ರಹ -Vishwanews24

ಮಂಗಳೂರು: ಕಾಪು ಶಾಸಕ ಲಾಲಾಜಿ ಮೆಂಡನ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮೀನುಗಾರರ ವೇದಿಕೆ ಆಗ್ರಹ -Vishwanews24

ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕಾದರೆ ಲಾಲಾಜಿ ಮೆಂಡನ್ ಅವರು ಸಚಿವರಾಗಬೇಕು..

ಮಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಅವರಿಗೆ ಸ್ಥಾನ ನೀಡಬೇಕೆಂದು ಮಂಗಳೂರಿನ ಮೀನುಗಾರರ ವೇದಿಕೆ ಆಗ್ರಹಿಸಿದೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ.ಕ ಮತ್ತು ಉಡುಪಿ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ಶರತ್ ಗುಡ್ಡೆಕೊಪ್ಲ, ಮೂರು ಬಾರಿ ಶಾಸಕರಾಗಿ ಅನುಭವ ಹೊಂದಿರುವ ಅನುಭವಿ ಲಾಲಾಜಿ ಮೆಂಡನ್ ಅವರಿಗೆ ಅರ್ಹವಾಗಿ ಸಚಿವ ಸ್ಥಾನ ದೊರೆಯಲೇಬೇಕು ಎಂದರು.

ಗಂಗಾಮತ/ಮೊಗವೀರ ಸಮುದಾಯಕ್ಕೆ ಸೇರಿದ 39 ವಿವಿಧ ಮೀನುಗಾರರ ಸಮುದಾಯದ ಕರ್ನಾಟಕದಲ್ಲಿ 80 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಮೊಗವೀರ ಸಮುದಾಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಮೀನುಗಾರರ ಹಲವು ಬೇಡಿಕೆಗಳು ಇನ್ನೂ ಈಡೇರಿಲ್ಲ. ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕಾದರೆ ಲಾಲಾಜಿ ಮೆಂಡನ್ ಅವರು ಸಚಿವರಾಗಬೇಕು. ಈ ಹಿಂದೆಯೂ ಮೆಂಡನ್ ಅವರಿಗೆ ಸ್ಥಾನ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದೆವು. ಆದರೆ ದೊರೆತಿರಲಿಲ್ಲ. ಈ ಬಾರಿಯಾದರೂ ಸಚಿವ ಸ್ಥಾನ ನೀಡಬೇಕು ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೊಗವೀರ ಸಮಾಜದ ಹಿರಿಯ ಮುಖಂಡ ನ್ಯಾಯವಾದಿ, ದಯಾನಾಥ್ ಕೋಟ್ಯಾನ್, ದ.ಕ ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷ ನ್ಯಾಯವಾದಿ ಗಂಗಾಧರ ಹೊಸಬೆಟ್ಟು, ಉಪಾಧ್ಯಕ್ಷ ದೇವದಾಸ್ ಬೋಳೂರು, ಮಂಗಳೂರು ಹದಿನಾಲ್ಕು ಪಟ್ನ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ರಾಜೀವ್ ಕಾಂಚನ್ , ಉರ್ವ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿಶ್ಚಂದ್ರ ಕರ್ಕೇರ ಉಪಸ್ಥಿತರಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

4 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

4 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

4 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

4 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

4 hours ago