ಮಂಗಳೂರು: ಕಾರು – ಕಂಟೈನರ್ ಢಿಕ್ಕಿ – ಓರ್ವ ಮೃತ್ಯು, ಇಬ್ಬರಿಗೆ ಗಾಯ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕಾರು – ಕಂಟೈನರ್ ಢಿಕ್ಕಿ – ಓರ್ವ ಮೃತ್ಯು, ಇಬ್ಬರಿಗೆ ಗಾಯ

ಮಂಗಳೂರು : ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಕಾರು ಚಾಲಕ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ.

ಮೃತರನ್ನು ಮಂಜೇಶ್ವರ ಸಮೀಪದ ಕುಂಜತ್ತೂರು ನಿವಾಸಿ ಇಬ್ರಾಹೀಂ(32) ಎಂದು ಗುರುತಿಸಲಾಗಿದೆ.

ಕುಂಜತ್ತೂರಿನಿಂದ ಬಂಟ್ವಾಳ ರಸ್ತೆಯಾಗಿ ಈ ಮೂವರು ಕಾರಿನಲ್ಲಿ ತೆರಳುತ್ತಿದ್ದು, ಈ ವೇಳೆ ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಕಾರು ಡಿವೈಡರ್ ದಾಟಿ‌ದಾಗ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜೆಸಿಬಿ ಟಯರ್‌ಗೆ ಗಾಳಿ ತುಂಬುತ್ತಿದ್ದಾಗ ಟಯರ್ ಸ್ಫೋಟ ; ಇಬ್ಬರು ಸಾವು – Vishwanews24

Leave a Reply