ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ನಲ್ಲಿರುವ ಪುಟ್ಬಾಲ್ ಮೈದಾನದ ಬಳಿ ಮಲಗಿದ್ದ ಕಾರು ಚಾಲಕ ಜನಾರ್ದನ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೇರಳ ಮೂಲದ ಪ್ರಶಾಂತ್ (40), ಕುಶಲನಗರದ ಜಿ.ಕೆ ರವಿಕುಮಾರ್ @ ನಂದೀಶ (38), ಕೊಣಾಜೆಯ ವಿಜಯ ಕುಟಿನ್ಹಾ (28) ,ಬಂಟ್ವಾಳದ ಶರತ್.ವಿ (36) ಎಂದು ಗುರುತಿಸಲಾಗಿದೆ.
ಮೊಬೈಲ್ ಸುಲಿಗೆ ಉದ್ದೇಶದಿಂದ ಕೊಲೆ: ಮಂಗಳವಾರ (ಏ.18 ರಂದು) ಸಂಜೆ ಸ್ಟೇಟ್ ಬ್ಯಾಂಕ್ ನಲ್ಲಿರುವ ಪುಟ್ಬಾಲ್ ಮೈದಾನದ ಬಳಿ ಮಲಗಿದ್ದ ಜನಾರ್ದನ ಪೂಜಾರಿ ಅವರ ಹತ್ತಿರ ಬಂದು ಆರೋಪಿಗಳು ಜನಾರ್ದನ ಅವರ ಮೊಬೈಲ್ ಕೊಡುವಂತೆ ಹೇಳಿದ್ದಾರೆ. ಇದೇ ಮಾತಿಗೆ ಆರೋಪಿಗಳ ಜೊತೆ ಘರ್ಷಣೆ ಉಂಟಾಗಿದೆ. ಈ ವೇಳೆ ಒಬ್ಬಾತ ತನ್ನ ಕಾಲಿನಿಂದ ಜನಾರ್ದನ ಪೂಜಾರಿ ಅವರ ಎದೆಗೆ ಒದ್ದಾಗ ಅವರು ಸುಮಾರು 6 ಅಡಿ ಮೇಲಿನಿಂದ ಕೆಳಗಡೆ ಬಿದ್ದಿದ್ದಾರೆ. ಬಳಿಕ ಪುನಃ ನಾಲ್ಕು ಜನ ಆರೋಪಿಗಳು ಜನಾರ್ದನ ಪೂಜಾರಿ ಅವರು ಬಿದ್ದಿದ್ದಲ್ಲಿಗೆ ಹೋಗಿ, ತಮ್ಮ ಕೈಗಳಿಂದ ಜನಾರ್ದನ ಪೂಜಾರಿ ಅವರಿಗೆ ಹಲ್ಲೆ ಮಾಡಿ ತಮ್ಮ ಕಾಲಿನಿಂದ ತುಳಿದು ಕೊಲೆಯನ್ನು ಮಾಡಿದ್ದಾರೆ. ಈ ಬಗ್ಗೆ ಜನಾರ್ದನ ಪೂಜಾರಿ ರವರ ಅಣ್ಣ ಉಮೇಶ್ ಪೂಜಾರಿ ದೂರು ನೀಡಿದ್ದಾರೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಸುಲಿಗೆ ಉದ್ದೇಶದಿಂದಲೇ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಗಳ ಕ್ರಿಮಿನಲ್ ಹಿನ್ನೆಲೆ: ಬಂಧಿತರಾಗಿರುವ ಆರೋಪಿಗಳ ಮೇಲೆ ಈಗಾಗಲೇ ಹಲವು ಕ್ರಿಮಿನಲ್ ಕೇಸ್ ದಾಖಲಾಗಿದ್ದು,ಜಿ.ಕೆ. ರವಿಕುಮಾರ್ ಎಂಬಾತನ ಮೇಲೆ 2009 ರಲ್ಲಿ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಶರತ್ ಎಂಬಾತನ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ 2007 ರಲ್ಲಿ ಮನೆ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ 2022 ರಲ್ಲಿ ಸುಲಿಗೆ ಪ್ರಕರಣ ದಾಖಲಾಗಿದೆ. ಈತ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾಗಿದ್ದ. ಆರೋಪಿ ವಿಜಯ ಕುಟಿನ್ಹಾ ಎಂಬಾತನ ಮೇಲೆ ಕೋಣಾಜೆ ಪೊಲೀಸ್ ಠಾಣೆಯಲ್ಲಿ 2022 ರಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…