Featured

ಮಂಗಳೂರು: ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ದಿಡೀರ್ ಭೇಟಿ  ಪರಿಶೀಲನೆ  – vishwanews24

ಮಂಗಳೂರು: ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದಿಡೀರ್ ಭೇಟಿ  ಪರಿಶೀಲನೆ

ಮಂಗಳೂರು: ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೋಗಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ವೇಳೆ ಆಸ್ಪತ್ರೆ ಯ ಹಿರಿಯ ಅಧಿಕಾರಿಗಳ ಅನುಪ ಸ್ಥಿತಿ ಕಂಡು ಬಂದಿದ್ದು ತಕ್ಷಣವೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ರೋಗಿಗಳ ಸಮಸ್ಯೆಗೆ ಕಾರಣವಾದ ಸರ್ವರ್ ದೋಷವನ್ನು ಸರಿಪಡಿಸಲು ಅಧಿಕಾರಿಗಳು ನೀಡಲಾಗಿರುವ ದೂರುಗಳ ಪತ್ರಗಳನ್ನು ಹಾಜರು ಪಡಿಸುವಂತೆ ತಿಳಿಸಿದರು. ಇದೆ ವೇಳೆ ಕಳೆದ ಹಲವಾರು ದಿನಗಳಿಂದ ಇಲ್ಲಿಗೆ ಬರುವ ರೋಗಿಗಳಿಗೆ ಸರ್ವರ್ ದೋಷವಿದೆ ಎಂದು ಹೇಳಿ, ದೂರದ ಊರುಗಳಿಂದ ಬರುವ ರೋಗಿಗಳು ಸತಾಯಿಸುವ ಬಗ್ಗೆ ಆಕ್ಷೇಪಣೆ ವ್ಯಕ್ತ ಪಡಿಸಿದ ಸಂಸದರು ಸರ್ವರ್ ಸಮಸ್ಯೆ ಇದ್ದರೆ ಇತರ ಆಸ್ಪತ್ರೆಗಳಿಗೆ ನೀಡುವ ಪತ್ರಗಳನ್ನು ಅಂತರ್ಜಾಲದಲ್ಲಿ ಆಗದಿದ್ದರೆ ಕೈ ಬರಹ ಮೂಲಕ ನೀಡಿ ಕೊಡಬೇಕು.ಯಾವುದೇ ಕಾರಣಕ್ಕೂ ರೋಗಿಗಳಿಗೆ ತೊಂದರೆ ನೀಡಬಾರದು ಎಂದು ತಾಕೀತು ಮಾಡಿದರು.

ಈ ವೇಳೆ ಸಂದರ್ಭದಲ್ಲಿ ಮಾತನಾಡಿದ ಓರ್ವ ರೋಗಿಯ ಸಂಭಧಿಕರು ಕಳೆದ ಹಲವಾರು ವರ್ಷಗಳಿಂದ ಡಯಬಿಟಿಸ್ ರೋಗಿಗಳಿಗೆ ಡಯಾಲಿಸಿಸ್ ಮಾಡಲು ಒಂದು ತಿಂಗಳಿಗೆ 12 ಟೋಕನ್ ನೀಡಲಾಗುತ್ತಿತ್ತು. ಆದರೆ ಈಗ 3ತಿಂಗಳಿಗೆ ಟೋಕನ್ ನೀಡಲಾಗುತ್ತಿದ್ದು ಅದು ಸಹ ಈಗ ಸರ್ವರ್ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ಸಿಗದೇ ಖಾಸಗಿ ಆಸ್ಪತ್ರೆಯಲ್ಲಿ ನಗದು ಹಣ ನೀಡಿ ಡಯಾಲಿಸಿಸಿ ಮಾಡಿಕೊಳ್ಳುವಂತಾಗಿದೆ.

ಅಲ್ಲದೆ ದೂರದ ಊರಿನಿಂದ ಬೆಳಗ್ಗೆ 8 ಗಂಟೆಗೆ ಬಂದ ನಮಗೆ ಈಗ ಸಂಜೆ 5ರ ತನಕವೂ ಸರ್ವರ್ ಸಮಸ್ಯೆ, ಸರಿ ಆಗಿಲ್ಲ ಎಂದರು ನಮಗೆ ಇಷ್ಟು ದೂರ ನಡೆಯಲು ಸಹ ಸಾಧ್ಯವಿಲ್ಲ. ಅಲ್ಲದೆ ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದರೆ ಮಾತ್ರ ಟೋಕನ್ ನೀಡಲಾಗುವುದು ಎನ್ನುವ ನಿಯಮ ಬೇರೆ ಜಾರಿ ಮಾಡಿದ್ದಾರೆ ಎಂದರು. ಇದೆ ವೇಳೆ ಭೇಟಿ ನೀಡಿದ್ದ ಮಾನ್ಯ ಸಂಸದರು ಇಂದು ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿದ್ದ ರೋಗಿಗಳ ಸಮಸ್ಯೆಯನ್ನು ತಿಳಿದುಕೊಂಡು ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಇಂದು ರೋಗಿಗಳಿಗೆ ಅವಶ್ಯ ವಾಗಿರುವ ಸೂಕ್ತ ದಾಖಲೆ ಗಳನ್ನು ಸ್ಥಳದಲ್ಲೇ ದೊರಕಿಸಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಸಮಸ್ಯೆ ಸರಿ ಪಡಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಸ್ಥಳದಲ್ಲಿದ್ದ ರೋಗಿಗಳು ಸಂತಸ ವ್ಯಕ್ತಪಡಿಸಿದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

7 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

11 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

13 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

15 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

15 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

15 hours ago