ಮಂಗಳೂರು: ಮೆಡಿಕಲ್ ಕಾಲೀಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.
ಕಳೆದ ದಿನ ಮೇ 8 ರಂದು ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇರಿಸಿ, ಮಹಿಳೆಯರ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯ ಮಾಹಿತಿಯ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಅತ್ಯಂತ ಗಂಭೀರವಾಗಿದೆ. ಈ ಕೃತ್ಯ ನಡೆಸಿದ ಬಾಲಕ ಇಂತಹ ಮಾನಸಿಕತೆ ಹೊಂದಿರಲು ಇವನು ಯಾವುದೇ ಜಿಹಾದಿ ಸಂಘಟನೆಗೆ ಸೇರಿಸುವ ಸಂಶಯ ಬಲವಾಗಿದ್ದು, ಅಲ್ಲದೆ ವ್ಯವಸ್ಥಿತ ತಂಡ ಬಾಲಕನನ್ನು ಇಂತಹ ಕೃತ್ಯ ನಡೆಸಲು ಪ್ರೇರೇಪಿಸುವ ಸಾಧ್ಯತೆ ಇದೆ.
ಉಡುಪಿಯಲ್ಲಿ ಇಂತಹ ಘಟನೆ ನಡೆದಿದ್ದು ಆ ಘಟನೆಯ ಹಿಂದೆ ಜಿಹಾದಿ ಸಂಘಟನೆಯ ಕೈವಾಡವಿತ್ತು. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕು ಅಲ್ಲದೆ ಈ ಕೃತ್ಯ ನಡೆಸಿರುವವನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾದ ಎಚ್ ಕೆ ಪುರುಷೋತ್ತಮ ಮತ್ತು ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಆಗ್ರಹಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…