Featured

ಮಂಗಳೂರು : ಕಾಲೇಜು ವಿದ್ಯಾರ್ಥಿಗೆ ಎದೆ ನೋವು ; ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ ಬಸ್ ಚಾಲಕ, ನಿರ್ವಾಹಕ – vishwanews24

ಮಂಗಳೂರು : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು

ಬಸ್ಸನ್ನು ಆಂಬುಲೆನ್ಸ್ ಮಾದರಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ ಬಸ್ ಚಾಲಕ, ನಿರ್ವಾಹಕ

ಮಂಗಳೂರು : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಏನನ್ನೂ ಯೋಚಿಸದೆ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ.

13ಎಫ್ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದೆ. ಆಕೆಗೆ ಹೃದಯಾಘಾತವಾಗುವ ಲಕ್ಷಣಗಳು ಕಂಡುಬರುತ್ತಿದ್ದಂತೆ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಗಜೇಂದ್ರ ಕುಂದರ್ ಹಾಗೂ ನಿರ್ವಾಹಕ ಮಹೇಶ್ ಪೂಜಾರಿ ಸುರೇಶ್ ಏನ್ನನ್ನು ಯೋಚಿಸದೆ ಎಲ್ಲಾ ಪ್ರಯಾಣಿಕರನ್ನು ಹೊತ್ತುಕೊಂಡು ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಸೈರಾನ್ ಹಾಕಿಕೊಂಡು 6 ಕಿ.ಮೀ ದೂರವನ್ನು 6 ನಿಮಿಷಗಳಲ್ಲಿ ಕ್ರಮಿಸಿ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ಹಾಗೂ ನಿರ್ವಾಹಕ ಯಾರ ಅನುಮತಿಯನ್ನು ಪಡೆಯದೇ ಆಸ್ಪತ್ರೆಯ ಆವರಣಕ್ಕೆ ಬಸ್ಸನ್ನು ಚಲಾಯಿಸಿದ್ದಾರೆ. ಸೂಕ್ತ ಸಮಯದಲ್ಲಿ ವಿದ್ಯಾರ್ಥಿಯನ್ನು ಕ್ಯಾಶುವಾಲಿಟಿ ವಾರ್ಡ್ ಗೆ ಸೇರಿಸಿದರು. ಇದರಿಂದಾಗಿ ವಿದ್ಯಾರ್ಥಿಯ ಜೀವ ಉಳಿಯಿತು. ಚಾಲಕನ ಹಾಗೂ ನಿರ್ವಾಹಕನ ಸಮಯಪ್ರಜ್ಞೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಕರಾವಳಿಯ ಬಸ್ಸು ಚಾಲಕ, ನಿರ್ವಹಕ, ಶ್ರಮಿಕ ವರ್ಗ ಮಾನವೀಯತೆಯ ಸಾಕಾರರು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago