Featured

ಮಂಗಳೂರು: ಕಾಲೇಜು ಹಾಸ್ಟೆಲ್ ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳ ಬಂಧನ – vishwanews24

ಮಂಗಳೂರು: ಕಾಲೇಜು ಹಾಸ್ಟೆಲ್ ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳ ಬಂಧನ

ಮಂಗಳೂರು: ನಗರದ ಸಮೀಪದ ಖಾಸಗಿ ಕಾಲೇಜೊಂದರ ಹಾಸ್ಟೆಲ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ.

ಹಾಸ್ಟೆಲ್‌ನಲ್ಲಿ ಕಾಲೇಜು ಸಿಬ್ಬಂದಿ ನಡೆಸಿದ ದಿಢೀರ್ ತಪಾಸಣೆ ವೇಳೆ ಮೂವರು ವಿದ್ಯಾರ್ಥಿಗಳು ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ ಸುಮಾರು 290 ಗ್ರಾಂ ಗಾಂಜಾ ಪತ್ತೆಯಾಗಿದೆ. ತಕ್ಷಣವೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ ವಿದ್ಯಾರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತ ವಿದ್ಯಾರ್ಥಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮೂವರೂ ಸಹ ಮಾದಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಎನ್‌ಡಿಪಿಎಸ್ (NDPS) ಕಾಯ್ದೆಯಡಿ, ಸೆಕ್ಷನ್ 27(b) (ಗಾಂಜಾ ಸೇವನೆ) ಮತ್ತು 8(C) ಸೇರಿದಂತೆ ಸೂಕ್ತ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ನಂತರ ಗಾಂಜಾ ತಂದಿದ್ದ ಪ್ರಮುಖ ವಿದ್ಯಾರ್ಥಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ವಿದ್ಯಾರ್ಥಿಯ ಶೈಕ್ಷಣಿಕ ಹಿನ್ನೆಲೆ ಮತ್ತು ವಶಪಡಿಸಿಕೊಂಡ ಗಾಂಜಾದ ಪ್ರಮಾಣವನ್ನು ಪರಿಗಣನೆಗೆ ತೆಗೆದುಕೊಂಡ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸಿದ ಪೆಡ್ಲರ್ (ಮಾರಾಟಗಾರ) ಯಾರೆಂಬುದರ ಬಗ್ಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago