ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟ ಸ್ಥಳಕ್ಕೆ ಗೃಹಮಂತ್ರಿ ಆರಗ, DGP ಪ್ರವೀಣ್ ಸೂದ್ ಭೇಟಿ – Vishwanews24
ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟ ಸ್ಥಳಕ್ಕೆ ಗೃಹಮಂತ್ರಿ ಆರಗ, DGP ಪ್ರವೀಣ್ ಸೂದ್ ಭೇಟಿ
ಮಂಗಳೂರು : ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇಂದು ಬೆಳಿಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ, ಡಿಜಿಪಿ ಪ್ರವೀಣ್ ಸೂದ್, ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
✈️ ಶಬರಿಮಲೆ ಭಕ್ತಾದಿಗಳಿಗೆ ವಿಮಾನದಲ್ಲಿ ಇರುಮುಡಿ ಜತೆ ತೆಂಗಿನಕಾಯಿ ಕೊಂಡೊಯ್ಯಲು ಅನುಮತಿ – Vishwanews24
