ಮಂಗಳೂರು: ಮಂಗಳೂರಿನಲ್ಲಿ ಉಗ್ರವಾದದ ಪರ ಗೋಡೆ ಬರಹ ಪ್ರಕರಣ, ಶಿವಮೊಗ್ಗದಲ್ಲಿ ಉಗ್ರಸಂಚು, ಪ್ರಾಯೋಗಿಕ ಬಾಂಬ್ ಸ್ಟೋಟ ನಡೆಸಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ನೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನಲೆಯಲ್ಲಿ ನಗರದ ಹೊರವಲಯದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ರಿಶಾನ್ ಶೇಖ್ ಸಹಿತ ಇಬ್ಬರನ್ನು ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ರಿಶಾನ್ ನೊಂದಿಗೆ ಶಿವಮೊಗ್ಗ ಜಿಲ್ಲೆಯ ಟಿಪ್ಪು ಸುಲ್ತಾನ್ ನಗರದ ಹುಜೈರ್ ಫರ್ಹಾನ್ ಬೇಗ್ ಎಂಬಾತನನ್ನೂ ಬಂಧಿಸಲಾಗಿದ್ದು, ಇನ್ನೋರ್ವ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್‍ಐಎ ತಿಳಿಸಿದೆ.
ಇನ್ನು ನಡುಪದವಿನ ಖಾಸಗಿ ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ರಿಶಾನ್ ತಾಜುದ್ದೀನ್ ಶೇಖ್ ನನ್ನು ಎನ್‍ಐಎ ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದಿದ್ದು, ಇವರಿಬ್ಬರೂ ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಬಾಂಬ್ ಸ್ಟೋಟ ನಡೆಸಿದ್ದ ಪ್ರಕರಣದಲ್ಲಿ ಬಂಧಿತನಾಗಿರುವ ಮಾಝ್ ಮುನೀರ್ ಜತೆ ನೇರವಾಗಿ ಸಂಪರ್ಕ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ರಿಶಾನ್ ತನಗೆ ಮಾಝ್ ಮುನೀರ್ ನ ಪರಿಚಯವಿದೆ ಆದರೆ ಕುಕ್ಕರ್ ಬಾಂಬ್ ಸ್ಟೋಟದ ಆರೋಪಿ ಸಾರೀಕ್ ನ ಪರಿಚಯ ಇಲ್ಲ ಎಂದು ಹೇಳಿರುವುದಾಗಿ ಎನ್‍ಐಎ ತಿಳಿಸಿದೆ.
ಶಿವಮೊಗ್ಗ ಪ್ರಕರಣದಲ್ಲಿ ಸಯ್ಯದ್ ಯಾಸೀನ್ ಬಂಧನದ ಬಳಿಕ ಮಾಝ್ ಮುನೀರ್ ನನ್ನು ಬಂಧಿಸಿದ್ದು, ಇವರ ಸಹವರ್ತಿಯಾಗಿದ್ದು, ಮಂಗಳೂರಿನ ಗೋಡೆ ಬರಹ ಬರೆದಿದ್ದ ಶಾರೀಕ್ ಮಂಅಳೂರಿನಲ್ಲಿ ಇತ್ತೀಚೆಗೆ ಕುಕ್ಕರ್ ಬಾಂಬ್ ಸ್ಟೋಟದಲ್ಲಿ ಗಾಯಗೊಂಡು ಸಿಕ್ಕಿಬಿದ್ದು ಎನ್‍ಐಎ ವಶದಲ್ಲಿದ್ದಾನೆ.
ಇನ್ನು ಎನ್‍ಐಎ ಗುರುವಾರ ವಶಕ್ಕೆ ಪಡೇದಿರುವ ರಿಶಾನ್ ತಾಜುದ್ದೀನ್ ಶೇಖ್ ಶಂಕಿತ ಉಗ್ರ ಮಾಝ್ ಮುನೀರ್ ಸಂಪರ್ಕದಲ್ಲಿರುವುದರ ಹಿನ್ನಲೆಯಲ್ಲಿ ಎನ್‍ಐಎ ಅಧಿಕಾರಿಗಳು ಆತನಿಗಾಗಿ ಬಲೆ ಬೀಸಿದ್ದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…