ಬೆಂಗಳೂರು : ಮಂಗಳೂರಿನ ಕಂಕನಾಡಿಯ ಗರಡಿ ಬಳಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಹಿನ್ನಲೆಯಲ್ಲಿ ಆತನನ್ನು ಹೆಚ್ಚಿನ ವಿಚಾರಣೆಗಾಗಿ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಮಾರ್ಚ್ 15ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಕುಕ್ಕರ್ ಬಾಂಬ್ ಸ್ಪೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಾರಿಕ್ ಮಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣಿಸದ ಹಿನ್ನಲೆ 2022ರ ಡಿಸೆಂಬರ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮೂರೂವರೆ ತಿಂಗಳು ಚಿಕಿತ್ಸೆ ಪಡೆದಿದ್ದ ಶಾರಿಕ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಈತನನ್ನು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್‌ಐಎ: ಶಾರೀಕ್‌ನ ಚಿಕಿತ್ಸೆ ಸಮಯದಲ್ಲಿ ಎನ್‌ಐಎ ಅಧಿಕಾರಿಗಳು ಕಾವಲಿಗಿದ್ದರು. ಶಾರಿಕ್ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ವಶಕ್ಕೆ ಪಡೆದ ಅಧಿಕಾರಿಗಳು, ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ‘ಸ್ಫೋಟದಿಂದ ಗಾಯಗೊಂಡಿದ್ದ ಶಾರಿಕ್‌ನನ್ನು ಇದುವರೆಗೂ ವಿಚಾರಣೆ ಮಾಡಿಲ್ಲ. ಈತ, ಭಯೋತ್ಪಾದನಾ ಸಂಘಟನೆ ಜೊತೆ ಗುರುತಿಸಿಕೊಂಡಿರುವ ಮಾಹಿತಿ ಇದೆ. ವಿಚಾರಣೆಗಾಗಿ ಈತನನ್ನು ಕಸ್ಟಡಿಗೆ ನೀಡಬೇಕು’ ಎಂದು ಎನ್‌ಐಎ ಅಧಿಕಾರಿಗಳು ಕೋರಿದರು. ಮನವಿ ಪುರಸ್ಕರಿಸಿದ ನ್ಯಾಯಾಲಯ, ಶಾರಿಕ್‌ನನ್ನು ಕಸ್ಟಡಿಗೆ ವಹಿಸಿತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…