ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ನನ್ನು ರಾಜ್ಯ ರಾಜಧಾನಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಮೊಹಮ್ಮದ್ ಶಾರೀಕ್ ಗಂಭೀರ ಗಾಯಗಳಿಂದ ಚೇತರಿಸಿಕೊಂಡಿದ್ದರು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದಾರೆ.
ಡಿ.17 ರ ಮುಂಜಾನೆ 6 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಇನ್ನು ಅಲ್ಲಿಂದಲೇ ಎನ್‌ಐಎ ತನಿಖೆ ಚುರುಕುಗೊಳಿಸಲಿದ್ದು, ಸ್ಪೋಟದ ಹಿಂದಿನ ಆತನ ಉದ್ದೇಶ, ಹಿಂದಿರುವ ಶಕ್ತಿಗಳನ್ನು ಹೊರಗೆಡವಲಿದೆ.
ನ.19ರ ಶನಿವಾರ ಸಂಜೆ ನಾಗುರಿ ಬಳಿ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಸಂಭವಿಸಿದ ಸಂದರ್ಭ ಗಂಭೀರ ಗಾಯಗೊಂಡಿದ್ದ ಶಾರೀಕ್‌ನನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಶ್ವಾಸಕೋಶದೊಳಗೆ ಹೊಗೆ ತುಂಬಿದ್ದರಿಂದ ಆರೋಗ್ಯ ಹದಗೆಟ್ಟಿತ್ತು. ಆತನ ಕಣ್ಣಿಗೂ ಹಾನಿಯಾಗಿತ್ತು. ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಇದೀಗ ಚೇತರಿಕೆ ಕಂಡಿದ್ದು ಬೆಂಗಳೂರಿಗೆ ಶಿಫ್ಟ್ ಆದ ಹಿನ್ನಲೆ ಎನ್.ಐ.ಎ ಕಚೇರಿಯಲ್ಲಿ ಶಾರೀಕ್ ನ ವಿಚಾರಣೆ ಮುಂದುವರಿಯಲಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…