ಮಂಗಳೂರು : ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿದ್ದು, ವಿಚಾರಣೆ ತೀವ್ರಗೊಳಿಸಲು ಪೊಲೀಸರು ವೈದ್ಯರ ಅನುಮತಿಗಾಗಿ ಕಾಯುತ್ತಿದ್ದಾರೆ.
ಆತನ ಶ್ವಾಸಕೋಶದೊಳಗೆ ಹೊಗೆ ತುಂಬಿದ್ದರಿಂದ ಆರೋಗ್ಯ ಹದಗೆಟ್ಟಿತ್ತು. ಆತನ ಕಣ್ಣಿಗೂ ಹಾನಿಯಾಗಿತ್ತು. ಇದೀಗ ಚಿಕಿತ್ಸೆಯಲ್ಲಿ ತುಸು ಚೇತರಿಸಿಕೊಂಡಿದ್ದು, ತನಿಖಾಧಿಕಾರಿಗಳು ತನಿಖೆಗೆ ಸಿದ್ಧತೆ ನಡೆಸಿದ್ದಾರೆ.
ಇನ್ನು ಒಂದೆರಡು ದಿನಗಳಲ್ಲಿ ಎನ್‌ಐಎ ತನಿಖೆ ಕೈಗೆತ್ತಿಕೊಳ್ಳಲಿದ್ದು ಇದರಿಂದ ಆತನ ಉದ್ದೇಶ, ಹಿಂದಿರುವ ಶಕ್ತಿಗಳ ಸಂಪೂರ್ಣ ಚಿತ್ರಣ ಸಿಗುವ ನಿರೀಕ್ಷೆ ಇದೆ.
ಇನ್ನು ಆತನಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಒಳಗೂ – ಹೊರಗೂ ಬಿಗಿ ಭದ್ರತೆ ಒದಗಿಸಲಾಗಿದೆ. ಹ್ಯಾಂಡ್ಲರ್ಸ್, ಸ್ಲೀಪರ್ ಸೆಲ್‌ಗಳನ್ನು ಅಕ್ಟಿವ್ ಮಾಡಿ ದಾಳಿ ನಡೆಸುವ ಶಂಕೆ ಹಿನ್ನೆಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಶಾರೀಕ್ ಇರುವ ವಾರ್ಡ್ ಬಳಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಒಬ್ಬ ಇನ್ಸ್‌ಪೆಕ್ಟರ್, ಓರ್ವ PSI, ASI ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…