Featured

ಮಂಗಳೂರು : ಕುಕ್ಕರ್ ಬ್ಲಾಸ್ ಪ್ರಕರಣ: ಇಂಜಿನಿಯರಿಂಗ್ ಕಾಲೇಜಿಗೆ NIA ದಾಳಿ – Vishwanews24

ಮಂಗಳೂರು : ಕುಕ್ಕರ್ ಬ್ಲಾಸ್ ಪ್ರಕರಣ: ಇಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್‌ಐಎ ದಾಳಿ

ಉಡುಪಿ ಮೂಲದ ವಿದ್ಯಾರ್ಥಿ ತಾಜುದ್ದೀನ್ ಶೇಖ್  ಎನ್‌ಐಎ ವಶಕ್ಕೆ

ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಇಂದು ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ.

ಅಲ್ಲದೇ ಪ್ರಕರಣ ಸಂಬಂಧ ಪಿ.ಎ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ.

ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದಂತ ಮಾಹಿತಿಯ ಆಧಾರ ಮೇಲೆ ಇಂದು ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ 7 ಎನ್‌ಐಎ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿದ್ದಾರೆ.

ಇದೀಗ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹಲವು ಮಹತ್ವದ ಮಾಹಿತಿಯನ್ನು ಕಲೆಹಾಕುವ ಕೆಲಸದಲ್ಲಿ ಎನ್‌ಐಎ ಅಧಿಕಾರಿಗಳು ನಿರತರಾಗಿರೋದಾಗಿ ತಿಳಿದು ಬಂದಿದೆ.

ಶಾರಿಕ್ ನೀಡಿದಂತ ಮಾಹಿತಿಯ ಆಧಾರದ ಮೇಲೆ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಂತ ಉಡುಪಿ ಮೂಲದ ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ಎನ್‌ಐಎ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಈತ ಶಿವಮೊಗ್ಗದಲ್ಲಿ ನಡೆದಿದ್ದಂತ ಟ್ರಯಲ್ ಬ್ಲಾಸ್ಟ್ ಸೇರಿದಂತೆ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಅಂದಹಾಗೆ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ತುಂಗಾದಡದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ಮಾಜ್ ಮುನೀರ್ ಬಂಧಿಸಿದ್ದರು. ಈ ಪ್ರಕರಣವನ್ನು ಸರ್ಕಾರ ಎನ್‌ಐಎಗೆ ವಹಿಸಿತ್ತು. ಈ ಸಂಬಂಧ ತನಿಖೆ ನಡೆಸಿದ್ದಂತ ಎನ್‌ಐಎ ಅಧಿಕಾರಿಗಳು, ಮಾಜ್ ಜೊತೆಗೆ ಉಗ್ರರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಂತ ಮಂಗಳೂರಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಓದುತ್ತಿದ್ದಂತ ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿದೆ. ಈ ಸಂಬಂಧ ತನಿಖೆ ಮುಂದುವರೆಸಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

19 minutes ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

6 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

8 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

8 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

8 hours ago