ಮಂಗಳೂರು: ಇತ್ತೀಚೆಗೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣ ‘ಗುರುಬೆಳದಿಂಗಳು ಫೌಂಡೇಶನ್’ ಮೂಲಕ ಶೀಘ್ರ ಆರಂಭಗೊಳ್ಳಲಿದೆ.
ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ರವರು, ಘಟನೆ ನಡೆದ ಮರುದಿನವೇ ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ನಿಗಾ ಇಟ್ಟುಕೊಂಡು ಫಾದರ್‌ಮುಲ್ಲರ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಜತೆ ಮಾತುಕತೆ ನಡೆಸಿದ ಬೇಕಾದ ವ್ಯವಸ್ಥೆ ಮಾಡಿದ್ದರು.
ಬಳಿಕವೂ ಪುರುಷೋತ್ತಮ ಪೂಜಾರಿ ಮತ್ತು ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಳ್ಳುತ್ತಾ ಬಂದಿದ್ದಾರೆ. ಆದರೆ ಕಳೆದ ವಾರ ಆಸ್ಪತ್ರೆಯಲ್ಲಿರುವ ಪುರುಷೋತ್ತಮ ಪೂಜಾರಿಯವರನ್ನು ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ಮಾಡಬೇಕು, ಅದಕ್ಕಿಂತ ಮೊದಲು ಮನೆಯನ್ನು ನವೀಕರಣಗೊಳಿಸಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದ ಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು.
ಈ ವೇಳೆ ಮನೆಯನ್ನು ನವೀಕರಿಸುವ ಜವಾಬ್ದಾರಿಯನ್ನು ‘ಗುರುಬೆಳದಿಂಗಳು ಫೌಂಡೇಶನ್’ ಮಾಡಲಿದೆ ಎಂದು ಪದ್ಮರಾಜ್‌ರವರು ಅವರಿಗೆ ಆತ್ಮಸ್ಥೈರ್ಯ ನೀಡಿದ್ದರು. ಅದರಂತೆ ಭಾನುವಾರ (ಡಿ.18) ಪುರುಷೋತ್ತಮ ಪೂಜಾರಿಯವರ ಮನೆಗೆ ಇಂಜಿನಿಯರ್ ದೀವರಾಜ್‌ರೊಂದಿಗೆ ಭೇಟಿ ನೀಡಿದ ಪದ್ಮರಾಜ್ ಆರ್.ರವರು ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಮನೆಯನ್ನು ಪರಿಶೀಲಿಸಿ ನವೀಕರಣಗೊಳಿಸುವ ಭರವಸೆ ನೀಡಿದ್ದು, ಮುಂದಿನ ವಾರದಿಂದ ಕಾಮಗಾರಿ ನಡೆಸುವುದಾಗಿ ತಿಳಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…