ಮಂಗಳೂರು : ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಮತ್ತು 5 ಲಕ್ಷ ರೂಪಾಯಿ ಮೌಲ್ಯದ ಚೆಕ್ ಹಸ್ತಾಂತರಿಸಲಾಯಿತು.
ಈ ವೇಳೆ ಮಾತನಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಕುಕ್ಕರ್ ಬಾಂಬ್ ಸ್ಫೋಟಿಸುವ ಮೂಲಕ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡುವ ಹುನ್ನಾರ ಈಗಾಗಲೇ ಬಯಲಾಗಿದೆ. ಎನ್‌ಐಎ ಅಧಿಕಾರಿಗಳೇ ಇದನ್ನು ಬಹಿರಂಗ ಪಡಿಸಿದ್ದು, ಕೃತ್ಯದ ಕುರಿತು ಅಪಹಾಸ್ಯ ಮಾಡಿದವರು, ಸ್ಫೋಟ ಮಾಡಿದವರನ್ನು ಅಮಾಯಕರು ಎಂದು ಹೇಳಿದ್ದ ಕಾಂಗ್ರೆಸಿಗರು ಈಗ ಏನು ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ಮತನಾಡಿದ ಅವರು ಇದೇ ಮತಬ್ಯಾಂಕ್, ತುಷ್ಠೀಕರಣದ ರಾಜಕೀಯವನ್ನು ಬಿಜೆಪಿ ಸಹಿಸುವುದಿಲ್ಲ ಎಂದರು. ಕಳೆದ ವರ್ಷ ನವೆಂಬರ್ 19 ರಂದು ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಸಂಭವಿಸಿತ್ತು. ಘಟನೆಯಲ್ಲಿ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಸಂದೀಪ್ ಗರೋಡಿ, ಸುಧೀರ್ ಶೆಟ್ಟಿ, ಶರಣ್ ಪಂಪ್‌ವೆಲ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.5ರಂದು ಮಂಗಳೂರು ನಗರದ…
ಶ್ರೀನಗರ : ಪಾರ್ಕಿಂಗ್ ಮಾಡುವ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ; ತಪ್ಪಿದ ಭಾರೀ ಅವಘಡ ಶ್ರೀನಗರ: ನವಿ…
ಪಣಂಬೂರು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್…
ವಿಜಯ್ ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ; ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ : ನಾಗರತ್ನ ಪ್ರತಿಕ್ರಿಯೆ ಬೆಂಗಳೂರು: ನಟ ದುನಿಯಾ…
ಪಡುಬಿದ್ರಿ : ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ; ಸವಾರ ಸಾವು ಉಡುಪಿ: ನಂದಿಕೂರಿನ ಕಾರ್ಕಳ–ಪಡುಬಿದ್ರಿ ಬಸ್ ನಿಲ್ದಾಣದ…
ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಮಂಗಳೂರು : ಬೆಂಗಳೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ…