Featured

ಮಂಗಳೂರು : ಕುಳಾಯಿ ಫೌಂಡೇಶನ್ ಮೂಲಕ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ – Vishwanews24

ಮಂಗಳೂರು : ಕುಳಾಯಿ ಫೌಂಡೇಶನ್ ಮೂಲಕ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ – Vishwanews24

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಪಡೆಯಲಾಗದೆ ಸಾವಿರಾರು ಮಂದಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಇಂತಹ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಕುಳಾಯಿ ಫೌಂಡೇಶನ್ ಸ್ಥಾಪಿಸಿ ಆ ಮೂಲಕ ಈ ವರ್ಷ 250 ಮಂದಿ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಲು ನಿರ್ಧರಿಸಲಾಗಿದೆ ಎಂದು ಫೌಂಡೇಶನ್ ಮುಖ್ಯಸ್ಥೆ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದತ್ತು ಸ್ವೀಕಾರ ಪಡೆಯಲು ವಿದ್ಯಾರ್ಥಿಗಳ ಅಂಕ ಯಾವುದೇ ರೀತಿಯಲ್ಲಿ ಮಾನದಂಡವಾಗಿರುವುದಿಲ್ಲ. ಮಕ್ಕಳ ಮನೆಯ ಆರ್ಥಿಕ ಪರಿಸ್ಥಿತಿ ಯನ್ನು ಪರಿಶೀಲಿಸಿ ಆಯ್ಕೆ ನಡೆಯಲಿದೆ. ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಯಾವುದೇ ಜಾತಿ, ಮತ ಬೇಧವಿಲ್ಲದೆ ವಿದ್ಯಾರ್ಥಿಗಳಿಗೆ ನೆರವಾಗಲಿ ದ್ದೇವೆ. ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶುಲ್ಕ ಭರಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ತಕ್ಷಣ ಶುಲ್ಕ ಪಾವತಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ದತ್ತು ಸ್ವೀಕಾರದ ಸದುಪಯೋಗ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ಜೂ.3೦ರ ಒಳಗೆ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ನಮ್ಮ ವಿಳಾಸಕ್ಕೆ ಕಳುಹಿಸಿಕೊಡಬೇಕು. ಬಂದ ಅರ್ಜಿಗಳಲ್ಲಿ ಆಯ್ಕೆ ಮಾಡಿ ಬಡ ಮಕ್ಕಳಿಗೆ ನೆರವು ನೀಡುವ ಉದ್ದೇಶ ಇಟ್ಟುಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಅರ್ಜಿ ಕಳುಹಿಸಬೇಕಾದ ವಿಳಾಸ: ಪ್ರತಿಭಾ ಕುಳಾಯಿ, ಕುಳಾಯಿ ಫೌಂಡೇಶನ್, ವಿ.ಟಿ.ರೋಡ್, ಕುಳಾಯಿ- ೫೭೫೦೧೯

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

4 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

5 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

5 hours ago