ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಪಡೆಯಲಾಗದೆ ಸಾವಿರಾರು ಮಂದಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಇಂತಹ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಕುಳಾಯಿ ಫೌಂಡೇಶನ್ ಸ್ಥಾಪಿಸಿ ಆ ಮೂಲಕ ಈ ವರ್ಷ 250 ಮಂದಿ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಲು ನಿರ್ಧರಿಸಲಾಗಿದೆ ಎಂದು ಫೌಂಡೇಶನ್ ಮುಖ್ಯಸ್ಥೆ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದತ್ತು ಸ್ವೀಕಾರ ಪಡೆಯಲು ವಿದ್ಯಾರ್ಥಿಗಳ ಅಂಕ ಯಾವುದೇ ರೀತಿಯಲ್ಲಿ ಮಾನದಂಡವಾಗಿರುವುದಿಲ್ಲ. ಮಕ್ಕಳ ಮನೆಯ ಆರ್ಥಿಕ ಪರಿಸ್ಥಿತಿ ಯನ್ನು ಪರಿಶೀಲಿಸಿ ಆಯ್ಕೆ ನಡೆಯಲಿದೆ. ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಯಾವುದೇ ಜಾತಿ, ಮತ ಬೇಧವಿಲ್ಲದೆ ವಿದ್ಯಾರ್ಥಿಗಳಿಗೆ ನೆರವಾಗಲಿ ದ್ದೇವೆ. ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶುಲ್ಕ ಭರಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ತಕ್ಷಣ ಶುಲ್ಕ ಪಾವತಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ದತ್ತು ಸ್ವೀಕಾರದ ಸದುಪಯೋಗ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ಜೂ.3೦ರ ಒಳಗೆ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ನಮ್ಮ ವಿಳಾಸಕ್ಕೆ ಕಳುಹಿಸಿಕೊಡಬೇಕು. ಬಂದ ಅರ್ಜಿಗಳಲ್ಲಿ ಆಯ್ಕೆ ಮಾಡಿ ಬಡ ಮಕ್ಕಳಿಗೆ ನೆರವು ನೀಡುವ ಉದ್ದೇಶ ಇಟ್ಟುಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಅರ್ಜಿ ಕಳುಹಿಸಬೇಕಾದ ವಿಳಾಸ: ಪ್ರತಿಭಾ ಕುಳಾಯಿ, ಕುಳಾಯಿ ಫೌಂಡೇಶನ್, ವಿ.ಟಿ.ರೋಡ್, ಕುಳಾಯಿ- ೫೭೫೦೧೯
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…