ಮಂಗಳೂರು: ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8:00 ಗಂಟೆಯಿಂದ ಜುಲೈ 25ರ ಬೆಳಗ್ಗೆ 8:00 ರವರೆಗೆ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿದೆ. ಹೀಗಾಗಿ ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.
ರಸ್ತೆ ದುರಸ್ತಿ ಹಿನ್ನೆಲೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಕೂಳೂರು ಹೊಸ ಸೇತುವೆಯಲ್ಲಿ ದ್ವಿಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತದೆ. ಆದ್ದರಿಂದ ಕೋಡಿಕಲ್ ಕ್ರಾಸ್‌ನಿಂದ ಕೆಐಒಸಿಎಲ್ ಜಂಕ್ಷನ್‌ವರೆಗೆ ಅದೇ ರೀತಿ ಪಣಂಬೂರು ಜಂಕ್ಷನ್‌ನಿಂದ ಕೆಐಒಸಿಎಲ್ ಜಂಕ್ಷನ್‌ವರೆಗೆ ಸಂಚಾರ ದಟ್ಟಣೆ ಹೆಚ್ಚಾಗಬಹುದಾಗಿದೆ.
ಈ ಹಿನ್ನೆಲೆ ಕೆಐಒಸಿಎಲ್ ಜಂಕ್ಷನ್ ಬಳಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುವ ಹೊಸ ಸೇತುವೆ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸುವುದು ಹಾಗೂ ಪೀಕ್ ಅವರ್ಸ್ ನಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರವನ್ನು ತಪ್ಪಿಸಲು ಈ ಕೆಳಗೆ ನಮೂದಿಸಿದ ಬದಲಿ ಮಾರ್ಗಗಳನ್ನು ಬಳಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.
ವಾಹನ ಚಾಲಕರು ಮತ್ತು ಸಾರ್ವಜನಿಕರು ಉಪಯೋಗಿಸಬಹುದಾದ ಇತರ ಮಾರ್ಗಗಳು:
➡️ಉಡುಪಿ ಕಡೆಯಿಂದ ಬೆಂಗಳೂರು, ಮೈಸೂರು ಕಡೆಗೆ ಚಲಿಸುವ ಎಲ್ಲಾ ವಿಧದ ಲಘು ವಾಹನ ಹಾಗೂ ಲಾರಿಗಳು ಪಡುಬಿದ್ರೆ ಕಡೆಯಿಂದ ಕಾರ್ಕಳ ಮೂಡಬಿದ್ರೆ ಮಾರ್ಗವಾಗಿ ಸಂಚರಿಸುವುದು.
➡️ಉಡುಪಿ/ಮುಲ್ಕಿ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಎಲ್ಲಾ ಲಘು ವಾಹನಗಳು ಮುಲ್ಕಿ ವಿಜಯ ಸನ್ನಿಧಿ ಬಳಿ ಎಡಕ್ಕೆ ತಿರುವು ತೆಗೆದುಕೊಂಡು ಕಿನ್ನಿಗೋಳಿ – ಕಟೀಲು – ಬಜಪೆ – ಮರವೂರು – ಕಾವೂರು ಮೂಲಕ ಮಂಗಳೂರು ಕಡೆಗೆ ಸಂಚರಿಸುವುದು.
➡️ಮಂಗಳೂರು ನಗರ / ಕೊಟ್ಟಾರ ಚೌಕಿ ಕಡೆಯಿಂದ ಉಡುಪಿ ಕಡೆಗೆ ಸಂಚರಿಸುವ ಎಲ್ಲಾ ಲಘು ವಾಹನಗಳು ಕಾವೂರು – ಮರವೂರು – ಬಜಪೆ – ಕಟೀಲು – ಕಿನ್ನಿಗೋಳಿ – ಮುಲ್ಕಿ ವಿಜಯ ಸನ್ನಿಧಿ ಮೂಲಕ ಉಡುಪಿ ಕಡೆಗೆ ಸಂಚರಿಸುವುದು.
➡️ಬಿ.ಸಿ.ರೋಡ್, ಬೆಂಗಳೂರು ಹಾಗೂ ಮೈಸೂರು ಕಡೆಯಿಂದ ಉಡುಪಿ ಕಡೆಗೆ ಸಂಚರಿಸುವ ಲಾರಿ ಹಾಗೂ ಲಘು ವಾಹನಗಳು ಬೀಕರ್ನಕಟ್ಟೆ- ಕುಲಶೇಖರ – ವಾಮಂಜೂರು – ಕೈಕಂಬ – ಬಜಪೆ – ಕಟೀಲು – ಕಿನ್ನಿಗೋಳಿ – ಮುಲ್ಕಿ ವಿಜಯ ಸನ್ನಿಧಿ ಮೂಲಕ ಉಡುಪಿ ಕಡೆಗೆ ಸಂಚರಿಸುವುದು.
➡️MCF, ONGC, HPCL, BPCL, IOCL, Total Gas, BASF, ರಫ್ತಾರ್, ಏಜಿಸ್ ಇತ್ಯಾದಿ ಕಂಪೆನಿಗಳಿಗೆ ಬರುವ ಹಾಗೂ ಕಂಪೆನಿಯಿಂದ ಹೊರಡುವ ಎಲ್ಲಾ ರೀತಿಯ ಗ್ಯಾಸ್ ಟ್ಯಾಂಕರ್, ಡಿಸೇಲ್/ಪೆಟ್ರೋಲ್ ಟ್ಯಾಂಕರ್ ಹಾಗೂ ಇತರ ಘನ ವಾಹನಗಳು ಕೂಳೂರು ಹೊಸ ಸೇತುವೆಯಲ್ಲಿ ಸಂಚಾರ ದಟ್ಟಣೆಯ ಸಮಯವನ್ನು ಹೊರತುಪಡಿಸಿ ಉಳಿದ ಸಮಯದಲ್ಲಿ ಸಂಚರಿಸಲು ಕೋರಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…