Featured

ಮಂಗಳೂರು: ಕೂಳೂರು ಹಳೆ ಸೇತುವೆ ದುರಸ್ತಿ – ಆ. 19ರಿಂದ 21ರವರೆಗೆ ಘನ ವಾಹನ ಸಂಚಾರ ನಿರ್ಬಂಧ: ಡಿಸಿ ಮುಲ್ಲೈ ಮುಗಿಲನ್ – vishwanews24

ಮಂಗಳೂರು: ಕೂಳೂರು ಹಳೆ ಸೇತುವೆ ದುರಸ್ತಿ ಕಾರ್ಯ- ಆ. 19ರಿಂದ 21ರವರೆಗೆ ಘನ ವಾಹನ ಸಂಚಾರ ನಿರ್ಬಂಧ: ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ಕೂಳೂರಿನ ಹಳೆಯ ಕಮಾನು ಸೇತುವೆಯಲ್ಲಿ ಘನ ವಾಹನಗಳ ಸಂಚಾರ ನಿರ್ಬಂಧಿಸುವಂತೆ ರಾ. ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ. ಆ ಹಿನ್ನೆಲೆಯಲ್ಲಿ ವಾಹನ ಸಂಚಾರ ಸರಾಗಗೊಳಿಸಲು ಶಿಪಾರಸ್ಸು ಮಾಡಲಾದ ಕೆಲವು ದುರಸ್ತಿ ಕಾರ್ಯ ಹಾಗೂ ಇತರ ಕಾರ್ಯಗಳನ್ನು ನಡೆಸುವ ನಿಟ್ಟಿನಲ್ಲಿ ಆ. 19ರಿಂದ 21ರವರೆಗೆ ಘನ ವಾಹನ ಸಂಚಾರ ನಿಷೇಧಿಸಿ ಪ್ರಾಯೋಗಿಕ ಸಂಚಾರಕ್ಕೆ ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಈ ಮೂರು ದಿನಗಳಲ್ಲಿ ಘನ ವಾಹನಗಳಿಗೆ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ಬೆಳಗ್ಗೆ 11ರಿಂದ 3 ಗಂಟೆಯವರೆಗೆ ಹೊಸ ಸೇತುವೆಯಲ್ಲಿ ಸಂಚರಿಸಲು ಅನುಮತಿಸಲಾಗಿದೆ. ಈ ಅವಧಿಯಲ್ಲಿ ಹೊಸ ಸೇತುವೆಯನ್ನು ಘನ ವಾಹನಗಳ ದ್ವಿಮುಖ ಸಂಚಾರಕ್ಕೆ ಉಪಯೋಗಿಸಲಾಗುವುದು. ಕುಳೂರು ಹಳೆಯ ಕಮಾನು ಸೇತುವೆಯನ್ನು ಪ್ರಯಾಣಿಕರ ಬಸ್ಸು ಹೊರತುಪಡಿಸಿ ಘನ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗುವುದು. ಬೆಳಗ್ಗೆ 6ರಿಂದ 11 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 10 ಗಂಟವಯೆರೆಗ ಉಡುಪಿಯಿಂದ ಕೇರಳಕ್ಕೆ ಸಂಚರಿಸುವ ವಾಹನಗಳು ಮುಲ್ಕಿ- ಸುರತ್ಕಲ್- ಎಂಆರ್‌ಪಿಎಲ್- ಬಜ್ಪೆ- ಕೆಪಿಟಿ- ನಂತೂರು ಮಾರ್ಗವಾಗಿ ಸಂಚರಿಸಬೇಕು ಮತ್ತು ಉಡುಪಿ ಸುರತ್ಕಲ್ ಬೆಂಗಳೂರು ಸಂಚರಿಸುವ ವಾಹನಗಳು ಉಡುಪಿ- ಮುಲ್ಕಿ- ಮೂಡಬಿದ್ರೆ- ಬಂಟ್ವಾಳ ಮಾರ್ಗವಾಗಿ ಸಂಚರಿಸಬೇಕು.

ಪ್ರಾಯೋಗಿಕ ಸಂಚಾರ ನಡೆಸಿದ ನಂತರ ಅಗತ್ಯ ಮಾರ್ಪಾಡು ಇದ್ದಲ್ಲಿ ಅದರೊಂದಿಗೆ ಈ ನಿರ್ಬಂಧವನ್ನು ಆ. 25ರಿಂದ ಸೆ. 29ವರೆರಗೆ ವಿಸ್ತಿರಸಲಾಗುವುದು. ಕೂಳೂರು ಸೇತುವೆಯ ದುರಸ್ತಿಯ ಅಗತ್ಯ ಕಾರ್ಯಗಳನ್ನು ಸೆ. 25ರೊಳಗೆ ಕಾರ್ಯಗತಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿದೆ. ಕೂಳೂರು ಸೇತುವೆಯ ಸಾಮರ್ಥ್ಯ ಹಾಗೂ ಸ್ಥಿರತೆ ಬಗ್ಗೆ ಆ. 20ರ ಒಳಗೆ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶಿಸಲಾ ಗಿದೆ. ಇದಲ್ಲದೆ ಹೊಸ ಸೇತುವೆಯ ಕಾಮಗಾರಿಯನ್ನು ತ್ವರಿತಗೊಳಿಸಿ ನಿರ್ದಿಷ್ಟ ಅವಧಿಯಲ್ಲಿ ಪೂರ್ಣಗೊಳಿಸಲು ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

5 minutes ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

2 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

2 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

22 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

24 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

24 hours ago