ಮಂಗಳೂರು: ಕೂಳೂರಿನ ಹಳೆಯ ಕಮಾನು ಸೇತುವೆಯಲ್ಲಿ ಘನ ವಾಹನಗಳ ಸಂಚಾರ ನಿರ್ಬಂಧಿಸುವಂತೆ ರಾ. ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ. ಆ ಹಿನ್ನೆಲೆಯಲ್ಲಿ ವಾಹನ ಸಂಚಾರ ಸರಾಗಗೊಳಿಸಲು ಶಿಪಾರಸ್ಸು ಮಾಡಲಾದ ಕೆಲವು ದುರಸ್ತಿ ಕಾರ್ಯ ಹಾಗೂ ಇತರ ಕಾರ್ಯಗಳನ್ನು ನಡೆಸುವ ನಿಟ್ಟಿನಲ್ಲಿ ಆ. 19ರಿಂದ 21ರವರೆಗೆ ಘನ ವಾಹನ ಸಂಚಾರ ನಿಷೇಧಿಸಿ ಪ್ರಾಯೋಗಿಕ ಸಂಚಾರಕ್ಕೆ ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಈ ಮೂರು ದಿನಗಳಲ್ಲಿ ಘನ ವಾಹನಗಳಿಗೆ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ಬೆಳಗ್ಗೆ 11ರಿಂದ 3 ಗಂಟೆಯವರೆಗೆ ಹೊಸ ಸೇತುವೆಯಲ್ಲಿ ಸಂಚರಿಸಲು ಅನುಮತಿಸಲಾಗಿದೆ. ಈ ಅವಧಿಯಲ್ಲಿ ಹೊಸ ಸೇತುವೆಯನ್ನು ಘನ ವಾಹನಗಳ ದ್ವಿಮುಖ ಸಂಚಾರಕ್ಕೆ ಉಪಯೋಗಿಸಲಾಗುವುದು. ಕುಳೂರು ಹಳೆಯ ಕಮಾನು ಸೇತುವೆಯನ್ನು ಪ್ರಯಾಣಿಕರ ಬಸ್ಸು ಹೊರತುಪಡಿಸಿ ಘನ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗುವುದು. ಬೆಳಗ್ಗೆ 6ರಿಂದ 11 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3ರಿಂದ ರಾತ್ರಿ 10 ಗಂಟವಯೆರೆಗ ಉಡುಪಿಯಿಂದ ಕೇರಳಕ್ಕೆ ಸಂಚರಿಸುವ ವಾಹನಗಳು ಮುಲ್ಕಿ- ಸುರತ್ಕಲ್- ಎಂಆರ್‌ಪಿಎಲ್- ಬಜ್ಪೆ- ಕೆಪಿಟಿ- ನಂತೂರು ಮಾರ್ಗವಾಗಿ ಸಂಚರಿಸಬೇಕು ಮತ್ತು ಉಡುಪಿ ಸುರತ್ಕಲ್ ಬೆಂಗಳೂರು ಸಂಚರಿಸುವ ವಾಹನಗಳು ಉಡುಪಿ- ಮುಲ್ಕಿ- ಮೂಡಬಿದ್ರೆ- ಬಂಟ್ವಾಳ ಮಾರ್ಗವಾಗಿ ಸಂಚರಿಸಬೇಕು.
ಪ್ರಾಯೋಗಿಕ ಸಂಚಾರ ನಡೆಸಿದ ನಂತರ ಅಗತ್ಯ ಮಾರ್ಪಾಡು ಇದ್ದಲ್ಲಿ ಅದರೊಂದಿಗೆ ಈ ನಿರ್ಬಂಧವನ್ನು ಆ. 25ರಿಂದ ಸೆ. 29ವರೆರಗೆ ವಿಸ್ತಿರಸಲಾಗುವುದು. ಕೂಳೂರು ಸೇತುವೆಯ ದುರಸ್ತಿಯ ಅಗತ್ಯ ಕಾರ್ಯಗಳನ್ನು ಸೆ. 25ರೊಳಗೆ ಕಾರ್ಯಗತಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿದೆ. ಕೂಳೂರು ಸೇತುವೆಯ ಸಾಮರ್ಥ್ಯ ಹಾಗೂ ಸ್ಥಿರತೆ ಬಗ್ಗೆ ಆ. 20ರ ಒಳಗೆ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶಿಸಲಾ ಗಿದೆ. ಇದಲ್ಲದೆ ಹೊಸ ಸೇತುವೆಯ ಕಾಮಗಾರಿಯನ್ನು ತ್ವರಿತಗೊಳಿಸಿ ನಿರ್ದಿಷ್ಟ ಅವಧಿಯಲ್ಲಿ ಪೂರ್ಣಗೊಳಿಸಲು ನಿರ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…