ಮಂಗಳೂರು: ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್‌ನಂತೆ ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ರಾಜ್ಯ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಜಾರಿಗೆ ತರಲಾಗಿದ್ದ ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಸಿಗುತ್ತಿತ್ತು. ಅದೇ ಮಾದರಿಯಲ್ಲಿ ಕೆಂಪು ಕಲ್ಲು ಕೂಡ ಜನಸಾಮಾನ್ಯರಿಗೆ ಸಿಗಬೇಕು. ಕೆಂಪುಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಸರಕಾರಿ ದರದಲ್ಲಿ ಕೆಂಪು ಕಲ್ಲನ್ನು ಅಗತ್ಯ ಇರುವವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯು ನೂತನ ಆ್ಯಪ್ ಮೂಲಕ ಆಗಲಿದೆ ಎಂದರು.
ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರೊಂದಿಗೆ ಬೆಂಗಳೂರಲ್ಲಿ 2ನೇ ಹಂತದ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಅಧಿಕಾರಿಗಳು ವಹಿಸಬೇಕಾದ ಕ್ರಮಗಳ ಕುರಿತು ಸೂಚಿಸಲಾಗಿದೆ. ಹಾಗಾಗಿ ಈ ಸಮಸ್ಯೆ ಶೀಘ್ರ ಬಗೆಹರಿಯಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…