Featured

ಮಂಗಳೂರು:  ಕೆಂಪು ಕಲ್ಲು, ಮರಳು ಸಮಸ್ಯೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಬೃಹತ್ ಮೆರವಣಿಗೆ , ಪ್ರತಿಭಟನಾ ಪ್ರದರ್ಶನ – vishwanews24

ಮಂಗಳೂರು:  ಕೆಂಪು ಕಲ್ಲು, ಮರಳು ಸಮಸ್ಯೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಬೃಹತ್ ಮೆರವಣಿಗೆ , ಪ್ರತಿಭಟನಾ ಪ್ರದರ್ಶನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ರಿ)ಸಿಡಬ್ಲ್ಯುಎಫ್‌ಐ -ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೃಹತ್ ಮೆರವಣಿಗೆ ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ನಡೆಯಿತು.

ಬಳಿಕ ನಡೆದ ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸಿದ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಅವರು ಲಕ್ಷಾಂತರ ಜನತೆಗೆ ಸಂಬಂಧಿಸಿ ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳು ನಾಟಕ ಮಾಡುತ್ತಿರುವುದು ಖಂಡನೀಯ ಎಂದರು.

ಕಳೆದ ಮೂರುವರೆ ತಿಂಗಳಿನಿಂದ ಈ ಸಮಸ್ಯೆಯನ್ನು ಪರಿಹರಿಸದೆ ಇರುವುದು ಆಕ್ಷೇಪಾರ್ಹವಾಗಿದೆ. ಕೆಲಸ ಕಳೆದುಕೊಂಡು ತೊಂದರೆಗೊಳಗಾದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಒಂದು ಕಡೆಯಾದರೆ, ಮನೆ ಕಟ್ಟಲು ಸಾಧ್ಯವಾಗದೆ ಕಚ್ಚಾ ವಸ್ತುಗಳಿಗೆ ವಿಪರೀತ ಬೆಲೆ ತೆರಬೇಕಾದ ಜನಸಾಮಾನ್ಯರ ಪರಿಸ್ಥಿತಿ ಚಿಂತಾಜನಕವಾಗಿದೆ. ಆಳುವ ಪಕ್ಷದವರು ಸಮಸ್ಯೆ ಇತ್ಯರ್ಥವಾಗಿದೆ ಎಂದು ಡಂಗುರ ಸಾರುತ್ತಿದ್ದಾರೆ. ಇದರ ಲಾಭವನ್ನು ಅನಧಿಕೃತ ವ್ಯಕ್ತಿ ಸಂಸ್ಥೆಗಳು ಪಡೆಯುವಂತಾಗಿದೆ ಎಂದರು.

ಏರಿಕೆಯಾದ ಕೆಂಪು ಕಲ್ಲಿನ ದರ ಮತ್ತು ಮರಳಿನ ದರವನ್ನು ಜನಪರವಾಗಿ ನಿರ್ಧರಿಸಲು ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಹತ್ತು ದಿನಗಳಾದರೂ ದಿವ್ಯ ಮೌನವೇ ಉತ್ತರವಾಗಿದೆ. ಸಾಮಾನ್ಯ ಜನರ ತಾಳ್ಮೆಗೂ ಮಿತಿ ಇರಲಿ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವ ತನಕ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ತಲಾ ಮಾಸಿಕವಾಗಿ ಹತ್ತು ಸಾವಿರ ರೂ.ನಂತೆ ಪರಿಹಾರ ಮೊತ್ತ ನೀಡಬೇಕೆಂದು ಒತ್ತಾಯಿಸಿದರು.

ಫೆಡರೇಶನ್‌ ಜಿಲ್ಲಾ ಕಾರ್ಯದರ್ಶಿ ಚಂದ್ರಹಾಸ ಪಿಲಾರ್‌ರವರು ಮಾತನಾಡಿ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಅನಗತ್ಯ ಕಿರುಕುಳ ನೀಡುವುದರ ಬದಲು ಎಲ್ಲಾ ನೋಂದಾಯಿತ ಕಾರ್ಮಿಕರಿಗೆ ನೀಡಬೇಕಾದ ಸವಲತ್ತನ್ನು ಸರಳವಾಗಿ ಮತ್ತು ನಿರಂತರವಾಗಿ ನೀಡುತ್ತಿರಬೇಕು. ಜಿಲ್ಲಾಡಳಿತದ ಕಾನೂನು ಕ್ರಮ ಕಟ್ಟುನಿಟ್ಟಿನ ನಿಯಮಗಳು ಅಭಿನಂದನಾರ್ಹವಾಗಿದ್ದರೂ ಕೆಂಪು ಕಲ್ಲು ಮತ್ತು ಮರಳು ಲಭ್ಯವೇ ಇಲ್ಲದ ಸ್ಥಿತಿ ನಿರ್ಮಾಣವಾದರೆ ಏನು ಪ್ರಯೋಜನ ಎಂದು ಅವರು ಪ್ರಶ್ನಿಸಿದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

9 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago