ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶ ಕುಸಿಯುವ ಭೀತಿ ಎದುರಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಭೂ ಮಾಫಿಯಾದ ವಾಸನೆ ಇದೆ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಿದ್ದೇನೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅಪಾಯದ ಅಂಚಿನಲ್ಲಿರುವ ಕೆತ್ತಿಕಲ್ ರಾ.ಹೆದ್ದಾರಿಯಲ್ಲಿ ಗುಡ್ಡವನ್ನು ಶುಕ್ರವಾರ ಬೆಳಗ್ಗೆ ವೀಕ್ಷಣೆ ಮಾಡಿದ ಬಳಿಕ ಸಚಿವರು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು.
ಕೆತ್ತಿಕಲ್ ನಲ್ಲಿ ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಮಣ್ಣು ಗಣಿಗಾರಿಕೆ ಮಾಡಲಾಗಿದೆ. ದೊಡ್ಡ ಪ್ರಮಾಣದ ಲೋಪದೋಷವಾಗಿರುವುದು ಕಂಡು ಬಂದಿದೆ ಎಂದು ಸಚಿವರು ಹೇಳಿದರು.
ಇಲ್ಲಿ ಗುಡ್ಡ ಅಪಾಯಕಾರಿಯಾಗಿರುವ ಬಗ್ಗೆ ಫೆಬ್ರವರಿ ತಿಂಗಳಲ್ಲೇ ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಮುನ್ಸೂಚನೆ ನೀಡಿತ್ತು. ಪಾಲಿಕೆ ಯಾವ ಕ್ರಮ ಕೈಗೊಂಡಿದೆ ಎಂದು ಪರಿಶೀಲನೆ ನಡೆಸಲಾಗುವುದು. ಗಣಿ ಭೂ ವಿಜ್ಞಾನ ಇಲಾಖೆ ಮಣ್ಣು ಅಗೆಯಲು ಅವಕಾಶ ಯಾಕೆ ನೀಡಿದೆ ಎಂದು ವರದಿ ಕೇಳುತ್ತೇನೆ ಎಂದು ಸಚಿವರು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…