ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಂದಾಜು 34.8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಫ್ಲೈಓವರ್ ಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದ್ದಾರೆ. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಇರುವ ಈ ಕಾಮಗಾರಿಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಅನುಮೋದನೆ ನೀಡಿರುವುದರಿಂದ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ ಎಂದವರು ವಿವರಿಸಿದ್ದಾರೆ.
ಕೆಪಿಟಿ ಪ್ರದೇಶದಲ್ಲಿ ವಾಹನ ದಟ್ಟಣೆ ಅಧಿಕವಾಗಿರುವ ಕಾರಣ ಸಂಚಾರ ಸಮಸ್ಯೆ ಎದುರಾಗುತ್ತಿತ್ತು ಇಲ್ಲಿ ಹೆದ್ದಾರಿಗೆ ಮಂಗಳೂರಿನ ಏರ್ ಪೋರ್ಟ್ ರಸ್ತೆಯಿಂದ ನಗರ ಪ್ರವೇಶ ರಸ್ತೆಯ ಸಂಪರ್ಕದಿಂದಾಗಿ ವಾಹನ ದಟ್ಟಣೆ ನಿತ್ಯ ಅಧಿಕವಾಗುತ್ತಿದೆ. ಹೀಗಾಗಿ ಬದಲಿ ರಸ್ತೆ ವ್ಯವಸ್ಥೆಯ ಬಗ್ಗೆ ಸ್ಥಳೀಯವಾಗಿ ಆಗ್ರಹ ಕೇಳಿಬಂದಿತ್ತು. ಇದರಂತೆ ಇದೀಗ ಫ್ಲೈಓವರ್ ನಿರ್ಮಾಣಕ್ಕೆ ಪ್ರಾಧಿಕಾರವು ನಿರ್ಧಾರ ಕೈಗೊಂಡಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…