ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 27 ಜಾನುವಾರುಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವ ಶಂಕೆ ವ್ಯಕ್ತಪಡಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಕಂಕನಾಡಿ ನಗರ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಮಾಹಿತಿ ಆಧಾರದ ಮೇಲೆ ಪೊಲೀಸರು ಜೆಪ್ಪಿನಮೊಗರು ಬಳಿ ಲಾರಿಯನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಲಾರಿಯನ್ನು ತಪಾಸಣೆ ನಡೆಸಿದಾಗ, ಯಾವುದೇ ಸೂಕ್ತ ಪರವಾನಗಿ ಇಲ್ಲದೆ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ಪತ್ತೆಯಾಗಿವೆ.
ಸದ್ಯ ಜಾನುವಾರು ಸಾಗಿಸುತ್ತಿದ್ದ ಲಾರಿಯನ್ನು ಜಪ್ತಿ ಮಾಡಲಾಗಿದ್ದು, ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕರಾವಳಿಯಲ್ಲಿ ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಅಕ್ರಮ ಜಾನುವಾರು ಸಾಗಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಸಂಘಟನೆಗಳು ಒತ್ತಾಯಿಸಿವೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…