Featured

ಮಂಗಳೂರು : ಕೇರಳದಿಂದ ಆಗಮಿಸುವವರಿಗೆ ಆರ್‌ ಟಿ ಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲಿಯೇ ಉಚಿತ ಪರೀಕ್ಷೆ -Vishwanews24

ಮಂಗಳೂರು : ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಮಂಗಳೂರು ಪ್ರವೇಶಕ್ಕೆ ಅನುಮತಿ

ಕೇರಳದಿಂದ ಆಗಮಿಸುವವರಿಗೆ ಆರ್‌ ಟಿ ಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲಿಯೇ ಉಚಿತ ಪರೀಕ್ಷೆ .

ಮಂಗಳೂರು : ಕೇರಳ ಮತ್ತು ಕರ್ನಾಟಕದ ದ.ಕ. ಜಿಲ್ಲೆಯ ಗಡಿಯಲ್ಲಿ ಕೇರಳದಿಂದ ಆಗಮಿಸುವವರಿಗೆ ಆರ್‌ಟಿಪಿಸಿಆರ್ ನೆಗಟಿವ್ ವರದಿ ಹೊಂದಿರುವುದನ್ನು ಕಡ್ಡಾಯ ಮಾಡಲಾಗಿದೆ. ಈ ನಿಟ್ಟಿನಲ್ಲಿ ತಪಾಸಣೆಗಾಗಿ ದ.ಕ. ಮತ್ತು ಕೇರಳ ಗಡಿ ಸಂಪರ್ಕಿಸುವ ತಲಪಾಡಿ, ಜಾಲ್ಸೂರು, ನೆಟ್ಟನಿಗೆ ಮುಡ್ನೂರು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಆರ್‌ಟಿ-ಪಿಸಿಆರ್ ನೆಗಟಿವ್ ವರದಿ ಹೊಂದಿದ್ದರೆ ಮಾತ್ರವೇ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.

ಮಂಗಳೂರಿನ ತಲಪಾಡಿಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯ ನಂತರ ತಪಾಸಣೆ ಆರಂಭಿಸಲಾಗಿದೆ. ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಮಂಗಳೂರು ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲಿಯೇ ಉಚಿತ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದ್ದು, ಎರಡು ದಿನಗಳಲ್ಲಿ ಟೆಸ್ಟ್ ವರದಿ ಅವರ ಕೈಸೇರಲಿದೆ.

ಕೇರಳ ಗಡಿ ಭಾಗದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವಂತೆ ರೂಪಾಂತರಿತ ಡೆಲ್ಟಾ ಕೋವಿಡ್ ಸೋಂಕು ಪತ್ತೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಆ ರಾಜ್ಯದ ಗಡಿಯನ್ನು ಹಂಚಿಕೊಳ್ಳುವ ಕರ್ನಾಟಕದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ದ.ಕ. ಜಿಲ್ಲೆಯ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago