ಮಂಗಳೂರು : ಕೇರಳ ಮತ್ತು ಕರ್ನಾಟಕದ ದ.ಕ. ಜಿಲ್ಲೆಯ ಗಡಿಯಲ್ಲಿ ಕೇರಳದಿಂದ ಆಗಮಿಸುವವರಿಗೆ ಆರ್‌ಟಿಪಿಸಿಆರ್ ನೆಗಟಿವ್ ವರದಿ ಹೊಂದಿರುವುದನ್ನು ಕಡ್ಡಾಯ ಮಾಡಲಾಗಿದೆ. ಈ ನಿಟ್ಟಿನಲ್ಲಿ ತಪಾಸಣೆಗಾಗಿ ದ.ಕ. ಮತ್ತು ಕೇರಳ ಗಡಿ ಸಂಪರ್ಕಿಸುವ ತಲಪಾಡಿ, ಜಾಲ್ಸೂರು, ನೆಟ್ಟನಿಗೆ ಮುಡ್ನೂರು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಆರ್‌ಟಿ-ಪಿಸಿಆರ್ ನೆಗಟಿವ್ ವರದಿ ಹೊಂದಿದ್ದರೆ ಮಾತ್ರವೇ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.
ಮಂಗಳೂರಿನ ತಲಪಾಡಿಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯ ನಂತರ ತಪಾಸಣೆ ಆರಂಭಿಸಲಾಗಿದೆ. ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಮಂಗಳೂರು ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಆರ್‌ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲಿಯೇ ಉಚಿತ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದ್ದು, ಎರಡು ದಿನಗಳಲ್ಲಿ ಟೆಸ್ಟ್ ವರದಿ ಅವರ ಕೈಸೇರಲಿದೆ.
ಕೇರಳ ಗಡಿ ಭಾಗದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವಂತೆ ರೂಪಾಂತರಿತ ಡೆಲ್ಟಾ ಕೋವಿಡ್ ಸೋಂಕು ಪತ್ತೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಆ ರಾಜ್ಯದ ಗಡಿಯನ್ನು ಹಂಚಿಕೊಳ್ಳುವ ಕರ್ನಾಟಕದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ದ.ಕ. ಜಿಲ್ಲೆಯ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…