Featured

ಮಂಗಳೂರು : ಕೇರಳದ ಉದ್ಯಮಿಗೆ ಹನಿಟ್ರ್ಯಾಪ್ ಪ್ರಕರಣ – ಯುವತಿ ಸೇರಿ ಎಂಟು ಮಂದಿಯ ಬಂಧನ – Vishwanews24

ಮಂಗಳೂರು : ಕೇರಳದ ಉದ್ಯಮಿಗೆ ಹನಿಟ್ರ್ಯಾಪ್ ಪ್ರಕರಣ – ಯುವತಿ ಸೇರಿ ಎಂಟು ಮಂದಿಯ ಬಂಧನ

ಮಂಗಳೂರು : ಹೆಣ್ಣಿನಾಸೆಯಿಂದ ಮಂಗಳೂರಿಗೆ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ತಂಡವೊಂದು ಹನಿಟ್ರ್ಯಾಪ್ ಮಾಡಿ ಬ್ಲಾಕ್ಮೇಲ್ ಮಾಡಿದ್ದು, ಯುವತಿ ಸೇರಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಳೆದ ಫೆಬ್ರವರಿ ತಿಂಗಳ 16ರಂದು ವಾಮಂಜೂರು ಬಳಿಯ ಮೂಡುಶೆಡ್ಡೆಯ ರೆಸಾರ್ಟಿನಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ ಮೊಯ್ದೀನ್ ಕುಂಞ(45) ಮತ್ತು ಮೊಹಮ್ಮದ್ ರುಕ್ಸಾದ್ ಎಂಬವರು ಬೇರೆಯವರ ಮೂಲಕ ಸಂಪರ್ಕಕ್ಕೆ ಬಂದಿದ್ದ ಮೂಡುಬಿದ್ರೆ ಮೂಲದ ಹುಡುಗಿಯ ಜೊತೆಗೆ ರೆಸಾರ್ಟಿಗೆ ತೆರಳಿದ್ದರು. ರಾತ್ರಿ ವೇಳೆ ಅಲ್ಲಿದ್ದಾಗಲೇ ತಂಡವೊಂದು ಕೊಠಡಿಗೆ ಎಂಟ್ರಿ ಕೊಟ್ಟಿದ್ದು, ಯುವಕರು ಫೋಟೋ, ವಿಡಿಯೋ ಮಾಡಿದ್ದರು. ಮೊಯ್ದೀನ್ ಕುಂಞಗೆ ಹಲ್ಲೆಗೈದು ಹಣಕ್ಕಾಗಿ ಪೀಡಿಸಿದ್ದರು. ಅಲ್ಲದೆ, ಇಂತಿಷ್ಟು ಹಣ ಕೊಟ್ಟರೆ ಮಾತ್ರ ಬಿಡ್ತೀವಿ, ಇಲ್ಲಾಂದ್ರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುತ್ತೇವೆಂದು ಬ್ಲಾಕ್ಮೇಲ್ ಮಾಡಿದ್ದರು. ಬೆದರಿದ ಮೊಯ್ದೀನ್ ಕುಂಞ ಹಣ ಕೊಟ್ಟು ಅಲ್ಲಿಂದ ಪಾರಾಗಿ ಬಂದಿದ್ದರು.

ಆದರೆ ಯುವಕರ ತಂಡ ಪದೇ ಪದೇ ಕರೆ ಮಾಡಿ, ಹಣಕ್ಕಾಗಿ ಪೀಡಿಸಿದ್ದಾರೆ. ಗೂಗಲ್ ಪೇ, ಬ್ಯಾಂಕ್ ಅಕೌಂಟ್ ಮೂಲಕ ಹಣ ಹಾಕಿಸಿಕೊಳ್ಳುತ್ತಿದ್ದರು. ಮೂರು ತಿಂಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಹಣವನ್ನು ಕಳಕೊಂಡ ಮೊಯ್ದೀನ್ ಕುಂಞ ಇತ್ತೀಚೆಗೆ ಕಾವೂರು ಠಾಣೆಗೆ ತೆರಳಿ ದೂರು ನೀಡಿದ್ದರು. ಕಮಿಷನರ್ ಸೂಚನೆಯಂತೆ ಪ್ರಕರಣವನ್ನು ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಪ್ರೀತಮ್ ಬೊಂದೇಲ್, ಮೂಡುಶೆಡ್ಡೆ ಆಸುಪಾಸಿನ ಕಿಶೋರ್, ಮುರಳಿ, ಸುಶಾಂತ್, ಅಭಿ ಸೇರಿ ಮೂಡುಬಿದ್ರೆ ಮೂಲದ ಯುವತಿಯನ್ನು ಅರೆಸ್ಟ್ ಮಾಡಿದ್ದಾರೆ.

ಯುವತಿಗೂ ಬ್ಲಾಕ್ಮೇಲ್ ಮಾಡಿದ ಯುವಕರಿಗೂ ಕನೆಕ್ಷನ್ ಇದೆಯೆನ್ನುವ ಮಾಹಿತಿಯಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

24 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago